Connect with us

ಮಾಜಿ ಸಂಸದೆ ರಮ್ಯಾ ನಿವಾಸಕ್ಕೆ ಪೊಲೀಸ್ ಭದ್ರತೆ

ಮಾಜಿ ಸಂಸದೆ ರಮ್ಯಾ ನಿವಾಸಕ್ಕೆ ಪೊಲೀಸ್ ಭದ್ರತೆ

ಮಂಡ್ಯ: ದಿವಂಗತ ಹಿರಿಯ ನಟ ಅಂಬರೀಶ್ ಅವರ ಅಂತ್ಯಸಂಸ್ಕಾರದಲ್ಲಿ ಮಾಜಿ ಸಂಸದೆ ರಮ್ಯಾ ಪಾಲ್ಗೊಳ್ಳಲಿಲ್ಲ. ಆದ್ದರಿಂದ ರಮ್ಯಾ ವಿರುದ್ಧ ಅಂಬಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ರಮ್ಯಾ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಮಂಡ್ಯದ ವಿದ್ಯಾನಗರದಲ್ಲಿರುವ ರಮ್ಯಾ ನಿವಾಸದ ಮುಂಭಾಗ ಪೇದೆಗಳನ್ನು ನಿಯೋಜನೆ ಮಾಡಲಾಗಿದೆ. ಅಭಿಮಾನಿಗಳಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ರಮ್ಯಾಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಮಂಡ್ಯ ಜನತೆ

ಸಂಸದೆ ರಮ್ಯಾ ಅಂಬರೀಶ್ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳದ್ದಕ್ಕೆ ರಮ್ಯಾ ವಿರುದ್ಧ ಅಂಬಿ ಅಭಿಮಾನಿಗಳು ಕಿಡಿಕಾರಿದ್ದರು. ಅಲ್ಲದೇ ರಮ್ಯಾ ಫೋಟೋದೊಂದಿಗೆ ಶ್ರದ್ಧಾಂಜಲಿ ಎಂದು ಬರೆದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದರು. ರಮ್ಯಾ ಇಂದು ಮಂಡ್ಯ ಜನತೆಯ ಪಾಲಿಗೆ ನಿಧನರಾಗಿದ್ದಾರೆ ಎಂಬ ಸಾಲುಗಳನ್ನು ಕೂಡ ಬರೆದುಕೊಂಡಿದ್ದರು. ಇದನ್ನೂ ಓದಿ: ಅಂಬಿ ಅಂತಿಮ ದರ್ಶನಕ್ಕೆ ಬಾರದ ರಮ್ಯಾ ಅಸಲಿ ಕಾರಣ ಇಲ್ಲಿದೆ

ಅಂತ್ಯಸಂಸ್ಕಾರಕ್ಕೆ ಬಾರದಿರಲು ಕಾರಣವೇನು?
ಮಾಜಿ ಸಂಸದೆ ರಮ್ಯಾ ಅವರು ಆಸ್ಟಿಯೋಕ್ಲ್ಯಾಟೋಮಾ(Osteoclastoma) ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ. ಆಸ್ಟಿಯೋಕ್ಲ್ಯಾಟೋಮಾ ಎನ್ನುವುದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದ್ದು, ರಮ್ಯಾ ಅವರ ಕಾಲಿನ ಎಲುಬುಗಳ ನಡುವೆ ಉಂಟಾಗಿರುವ ಸಮಸ್ಯೆ ಇದಾಗಿದೆ. ಕೊಂಚ ನಿರ್ಲಕ್ಷ್ಯ ವಹಿಸಿದರು ಮಾರಕ ಕಾಯಿಲೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದರಂತೆ. ಹೀಗಾಗಿ ಅವರು ಚಿಕಿತ್ಸೆ ಪಡೆದು ಅಕ್ಟೊಬರ್ ನಿಂದ ವಿಶ್ರಾಂತಿ ಪಡೆಯುತ್ತಿದ್ದಾರಂತೆ. ಈ ಕುರಿತು ಸ್ವತಃ ರಮ್ಯಾ ಅವರೇ ತಮ್ಮ ಇನ್ ಸ್ಟಾಗ್ರಾಂನಲ್ಲಿ ಕಾಲಿನ ಚಿತ್ರ ಹಾಕಿ ಬರೆದುಕೊಂಡಿದ್ದರು. ಈ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಸಚಿವ ಡಿಕೆಶಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ರಮ್ಯಾ ಕಾಲು ಜಾರಿ ಬಿದ್ದಿರುವುದಾಗಿ ನನಗೆ ತಿಳಿಸಿದ್ದರು. ಹೀಗಾಗಿ ರಮ್ಯಾ ಆರೋಗ್ಯದ ಬಗ್ಗೆ ಗೊಂದಲ ಸೃಷ್ಟಿಯಾಗಿದೆ.

https://www.youtube.com/watch?v=Mjhjp0vXrLY

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Advertisement
Advertisement