Connect with us

Bengaluru City

ಬೆಂಗ್ಳೂರಿನಲ್ಲಿ ಹಾಡಹಗಲೇ ಪೊಲೀಸರ ಮನೆಗೆ ಕನ್ನ

Published

on

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪೊಲೀಸರ ಮನೆಗಳಿಗೂ ಭದ್ರತೆ ಇಲ್ಲದಂತಾಗಿದೆ. ಹಾಡಹಗಲೇ ಪೊಲೀಸ್ ಮುಖ್ಯ ಪೇದೆಯೊಬ್ಬರ ಮನೆಗೆ ಕನ್ನ ಹಾಕಿದ್ದಾರೆ.

ಆನಂದ್ ರಾವ್ ಸರ್ಕಲ್ ಸಮೀಪದ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ಈ ಘಟನೆ ನಡೆದಿದ್ದು, ಹೆಬ್ಬಾಳ ಟ್ರಾಫಿಕ್ ಪೊಲೀಸ್ ಮುಖ್ಯಪೇದೆ ವೆಂಕಟೇಶ್ ಮನೆಯಲ್ಲಿ ಕಳ್ಳತನ ನಡೆದಿದೆ. ಬೀಗ ಒಡೆದ ಕಳ್ಳರು ಸಿಕ್ಕಿದ್ದೆಲ್ಲಾ ದೋಚಿ ಪರಾರಿಯಾಗಿದ್ದಾರೆ.

ಶನಿವಾರ ಬೆಳಗ್ಗೆ ಮನೆಗೆ ಬೀಗ ಹಾಕಿ ವೆಂಕಟೇಶ್ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಮನೆ ಬೀಗ ಒಡೆದು ಮನೆಯೊಳಗಿದ್ದ 7 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು 40 ಸಾವಿರ ನಗದು ಹಣ ಕದ್ದು ಪರಾರಿಯಾಗಿದ್ದಾರೆ. ಸಂಜೆ ನೆರೆ ಮನೆಯವರು ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ಪೊಲೀಸರ ಕ್ವಾರ್ಟರ್ಸ್ ನಲ್ಲೇ ರಕ್ಷಣೆ ಇಲ್ಲದಂತಾಗಿದೆ. ಅಷ್ಟೇ ಅಲ್ಲದೇ ಸರಿಯಾದ ಬೀದಿ ದೀಪ, ಬೀಟ್ ವ್ಯವಸ್ಥೆ ಮತ್ತು ಭದ್ರತೆ ಇಲ್ಲವೆಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Click to comment

Leave a Reply

Your email address will not be published. Required fields are marked *