ಬೆಂಗಳೂರು: ನಗರದ (Bengaluru) ಸ್ಪಾಗಳ ಮೇಲೆ ಪೂರ್ವ ವಿಭಾಗದ ಪೊಲೀಸರು ದಾಳಿ (Spa Raids) ನಡೆಸಿದ್ದಾರೆ. ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸ್ಪಾಗಳ ಮೇಲೆ ದಾಳಿ ನಡೆಸಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಅಕ್ರಮ ಚಟುವಟಿಗೆ ಬಗ್ಗೆ ಮಾಹಿತಿ ಬಂದ ಹಿನ್ನಲೆ ಸ್ಪಾಗಳ ಮೇಲೆ ಪೂರ್ವ ವಿಭಾಗದ ಡಿಸಿಪಿ ನೇತೃತ್ವ ತಂಡ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. 79 ಸ್ಪಾಗಳ ಮೇಲೆ ದಾಳಿ ನಡೆದಿದ್ದು, ಕೆಲವು ಸ್ಪಾಗಳಲ್ಲಿ ಸರ್ಕಾರದ ನಿಯಮ ಉಲ್ಲಂಘನೆಯಾಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಸ್ಪಾಗಳ ಹೆಸರಲ್ಲಿ ವೇಶ್ಯಾವಾಟಿಕೆ – ಗ್ರಾಹಕರಂತೆ ತೆರಳಿ 29 ಮಹಿಳೆಯರನ್ನು ರಕ್ಷಿಸಿದ ದೆಹಲಿ ಪೊಲೀಸರು
ನಿಯಮ ಉಲ್ಲಂಘನೆ ಮಾಡಿರುವ ಸ್ಪಾಗಳ ಮೇಲೆ ಕೇಸ್ ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಯುತ್ತಿದೆ ಎಂದು ಪೂರ್ವ ವಿಭಾಗದ ಡಿಸಿಪಿ ಗೀತಾ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಕಂದಕಕ್ಕೆ ಉರುಳಿದ ಕಾರು – 7 ಮಂದಿ ಸಾವು, ಐವರಿಗೆ ಗಾಯ
