ಹಾವೇರಿ: ಅಕ್ರಮವಾಗಿ ಕಳ್ಳಬಟ್ಟಿ ತಯಾರಿಕಾ ಅಡ್ಡೆಗಳ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರು ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಹುಲಗಿನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕಳೆದ ಕೆಲವು ದಿನಗಳಿಂದ ಗ್ರಾಮದಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ಸಾರಾಯಿ ತಯಾರಿಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಒಂದು ಸಾವಿರ ಲೀಟರ್ ಕೊಳೆ ನಾಶ ಮಾಡಿದ್ದಾರೆ. ಅಲ್ಲದೇ 500 ಲೀಟರ್ ನಷ್ಟು ಕಳ್ಳಬಟ್ಟಿ ಸಾರಾಯಿಯನ್ನು ವಶಪಡಿಸಿಕೊಂಡಿದ್ದಾರೆ.
Advertisement
Advertisement
ಗ್ರಾಮದಲ್ಲಿನ ಮನೆ ಹಾಗೂ ಮನೆಯ ಹಿಂದಿನ ಜಮೀನಿನಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ಸಾರಾಯಿ ತಯಾರಿಸುತ್ತಿದ್ದರು ಎನ್ನಲಾಗಿದೆ. ಹಾನಗಲ್ ಸಿಪಿಐ, ಅಬಕಾರಿ ನಿರೀಕ್ಷಕ ಹೊನ್ನಪ್ಪ ನೇತೃತ್ವದಲ್ಲಿ ದಾಳಿ ನಡೆದಿದೆ. ಈ ಕುರಿತು ಅಬಕಾರಿ ಹಾಗೂ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.