ಹಾಸನ: ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು (Police) ದಾಳಿ ನಡೆಸಿ ಗಾಂಜಾ ಹಾಗೂ ಮೊಬೈಲ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಾಗೃಹದ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಜಿಲ್ಲಾ ಕಾರಾಗೃಹದ ಮೇಲೆ ಇತ್ತೀಚೆಗೆ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ಮೊಬೈಲ್, ಗಾಂಜಾ, ಸಿಗರೇಟ್, ಬಿಡಿ ಮತ್ತು ಮೊಬೈಲ್ ಚಾರ್ಜರ್‌ಗಳು ಪತ್ತೆಯಾಗಿದ್ದವು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ಕಾರಾಗೃಹ ಪೊಲೀಸ್ ಮಹಾನಿರ್ದೇಶಕರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಹಾಸನ (Hassan) ಉಪಕಾರಾಗೃಹದ ಪೊಲೀಸ್ ಅಧೀಕ್ಷಕ ಸುರೇಶ್, ಜೈಲರ್ ಖುತುಬುದ್ದೀನ್ ದೇಸಾಯಿ, ಜಾದವ್ ಹಾಗೂ ಪಾಟೀಲ್ ಅಮಾನತಾದ ಅಧಿಕಾರಿಗಳಾಗಿದ್ದಾರೆ. ಇದನ್ನೂ ಓದಿ: ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರಿಂದ ರಾತ್ರೋ ರಾತ್ರಿ ದಾಳಿ – 17 ಮೊಬೈಲ್, ಗಾಂಜಾ, ಸಿಗರೇಟ್ ಸೀಜ್
ಸೆಲ್‍ನ ಒಳಗಿನಿಂದ ಖೈದಿಯೊಬ್ಬ ಜೈಲಿನನಲ್ಲಿ ನಡೆಯುತ್ತಿದ್ದ ಅವ್ಯವಹಾರವನ್ನು ವೀಡಿಯೋ ಮಾಡಿ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಮಾಡಿದ್ದ. ಈ ಹಿನ್ನಲೆಯಲ್ಲಿ ಆ.19 ರಂದು ಪೊಲೀಸರು ದಾಳಿ ನಡೆಸಿ 18 ಮೊಬೈಲ್, ಗಾಂಜಾ, ಸಿಗರೇಟ್ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಈ ವಿಚಾರದಲ್ಲಿ ಕರ್ತವ್ಯ ಲೋಪ ಸಾಬೀತಾದ ಹಿನ್ನಲೆಯಲ್ಲಿ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಇಲ್ಲಿ ಅಣ್ಣ-ತಮ್ಮನ ಪ್ರಶ್ನೆ ಬರಲ್ಲ.. ರೈತರು, ನೀರಿನ ಪ್ರಶ್ನೆ: ಹೆಚ್‌ಡಿಕೆ
Web Stories