ಮಂಗಳೂರು: ಇಲ್ಲಿನ (Mangaluru Jail) ಕೋಡಿಯಾಲ್‌ಬೈಲ್‌ನಲ್ಲಿರುವ ಕಾರಾಗೃಹದ ಮೇಲೆ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಗಾಂಜಾ, ಡ್ರಗ್ಸ್, ಮೊಬೈಲ್ ಸೇರಿ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಜೈಲಿನೊಳಗೆ ಇಂದು ಬೆಳಗ್ಗಿನ ಜಾವ 150 ಕ್ಕೂ ಅಧಿಕ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಕೈದಿಗಳನ್ನು ಹಾಗೂ ಸೆಲ್‌ಗಳಲ್ಲಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಖೈದಿಗಳ ಜೊತೆ ಗಾಂಜಾ ಹಾಗೂ ಡ್ರಗ್ಸ್ ಪ್ಯಾಕೇಟ್‌ಗಳು ಸಿಕ್ಕಿದ್ದು ಅದನ್ನ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಬೀದರ್‌ನಲ್ಲಿ ಧಾರಾಕಾರ ಮಳೆಗೆ ಅವಾಂತರ ಸೃಷ್ಟಿ – ವಾರದಲ್ಲಿ ಬರೋಬ್ಬರಿ 90ಕ್ಕೂ ಅಧಿಕ ಮನೆಗಳು ಕುಸಿತ
Advertisement
Advertisement
25 ಮೊಬೈಲ್ ಫೋನ್‌ಗಳು, ಐದು ಚಾರ್ಜರ್, ಐದು ಇಯರ್ ಫೋನ್, ಒಂದು ಬ್ಲೂಟೂತ್ ಡಿವೈಸ್, ಒಂದು ಪೆನ್‌ಡ್ರೈವ್, ಒಂದು ಕತ್ತರಿ ಸೇರಿದಂತೆ ವಿವಿಧ ವಸ್ತುಗಳು ಪತ್ತೆಯಾಗಿವೆ. ಎಲ್ಲವನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡ್ರಗ್, ಗಾಂಜಾ ಪತ್ತೆ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ತನಿಖೆಗೆ ಆದೇಶ ನೀಡಿದ್ದಾರೆ.
Advertisement
Advertisement
ಪೊಲೀಸ್ ಕಮಿಷನರ್ ಮಾರ್ಗದರ್ಶನದಲ್ಲಿ ಇಬ್ಬರು ಡಿಸಿಪಿ, ಮೂವರು ಎಸಿಪಿ, 15 ಇನ್‌ಸ್ಪೆಕ್ಟರ್, 150 ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಊಟ, ಹಾಸಿಗೆ ಕೊಡ್ತಾರೆ ಮಲಗಿ ಹೋಗೋಣ ಅಂತಾ ಪ್ರತಿಭಟನೆ ಮಾಡ್ತಿದ್ದಾರೆ: ಲಕ್ಷ್ಮಣ ಸವದಿ