ಮಂಗಳೂರು: ಕರಾವಳಿ ನಗರಿಯ ಪ್ರತಿಷ್ಠಿತ ಕಾಲೇಜೊಂದರ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಇಟ್ಟುಕೊಂಡು ಪೆಂಟ್ ಹೌಸ್ ಒಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಶಮೀನಾ, ಆಯಿಷಮ್ಮ, ಸಿದ್ದೀಕ್ ಬಂಧಿತ ಆರೋಪಿಗಳು. ಪಿಯುಸಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು ನಾಲ್ವರ ರಕ್ಷಣೆ ಮಾಡಲಾಗಿದೆ. ಪೆಂಟ್ ಹೌಸ್ನಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ವೇಶ್ಯಾವಾಟಿಕೆಯ ಚಲನವಲನವನ್ನು ಸೆರೆ ಹಿಡಿದಿಟ್ಟುಕೊಂಡ ದೃಶ್ಯಾವಳಿಗಳಿಂದ ಯುವತಿಯೊಬ್ಬಳು ಬಾಲಕಿಯರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದಳು. ಇದನ್ನೂ ಓದಿ: ಅಜ್ಮೀರ್ ದರ್ಗಾಕ್ಕೆ ಚಾದರ ಕಳಿಸಿಕೊಟ್ಟ ಪ್ರಧಾನಿ ಮೋದಿ
Advertisement
Advertisement
ಈ ಕುರಿತು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆ, ಐ.ಟಿ.ಪಿ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿಯೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಅನೈತಿಕ ಸಂಬಂಧ ಶಂಕೆ- ನೀರು ಅಂತ ಎಣ್ಣೆ ಕಾಯಿಸಿ ಪತ್ನಿ ಮೇಲೆ ಎರಚಿದ್ದವ ಅರೆಸ್ಟ್
Advertisement
ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಸಿ.ಸಿ.ಬಿ ಪೊಲೀಸರಿಗೆ ಕಾನೂನು ಸುವ್ಯವಸ್ಥೆ ವಿಭಾಗದ ಡಿ.ಸಿ.ಪಿ ಹರಿರಾಂ ಶಂಕರ್ ಮೇಲುಸ್ತುವಾರಿಯಲ್ಲಿ ಹೆಚ್ಚಿನ ತನಿಖೆ ನಡೆಸಲು ಸೂಚಿಸಿದ್ದಾರೆ.