– ಸಹಾಯಕ್ಕೆ ಧಾವಿಸಿದ ಮಾಜಿ ಎಂಎಲ್‍ಸಿ
ಕೊಪ್ಪಳ: ಜಿಲ್ಲೆಯಲ್ಲಿ ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಎಡವಟ್ಟು ನಡೆದಿದ್ದು, ಶೌಚಾಲಯ ಇಲ್ಲದೆ ವಿದ್ಯಾರ್ಥಿಗಳ ಪರದಾಡುವಂಹ ಪರಿಸ್ಥಿತಿ ನಿರ್ಮಾಣವಾಗಿದೆ.
ಕೆ.ಎಸ್.ಆರ್.ಪಿ ಪರೀಕ್ಷೆ ಹಿನ್ನೆಲೆಯಲ್ಲಿ ಗಂಗಾವತಿಗೆ 8,360 ವಿದ್ಯಾರ್ಥಿಗಳು ಆಗಮಿಸಿದ್ದರು. ಗಂಗಾವತಿ ತಾಲೂಕಿನಾದ್ಯಾಂತ ಸುಮಾರು 21 ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಆದ್ದರಿಂದ ಶನಿವಾರ ರಾತ್ರಿನೇ ಗಂಗಾವತಿಗೆ ಸಾವಿರಾರು ವಿದ್ಯಾರ್ಥಿಗಳು ಬಂದಿಳಿದಿದ್ದಾರೆ. ಆದರೆ ಬಂದಿರುವ ವಿದ್ಯಾರ್ಥಿಗಳಿಗೆ ತಂಗಲು ವ್ಯವಸ್ಥೆ ಇಲ್ಲದೆ ಪರದಾಡಿದ್ದಾರೆ.
Advertisement
Advertisement
ನಗರದಲ್ಲಿ ಮೂಲಭೂತ ಸೌಕರ್ಯ ಇಲ್ಲದೆ ವಿದ್ಯಾರ್ಥಿಗಳು ಪರದಾಡಿದ್ದು, ಒಂದೇ ಒಂದು ಶೌಚಾಲಯಕ್ಕೆ ಸಾಗರೋಪಾದಿಯಲ್ಲಿ ವಿದ್ಯಾರ್ಥಿಗಳು ಕ್ಯೂ ನಿಂತಿದ್ದರು. ಕೊನೆಗೆ ಕೆ.ಎಸ್.ಆರ್.ಪಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಕಷ್ಟಕ್ಕೆ ಮಾಜಿ ಎಂಎಲ್ ಸಿ ಎಚ್.ಆರ್. ಶ್ರೀನಾಥ್ ನೇರವಾಗಿದ್ದಾರೆ. ತಕ್ಷಣ ಅವರು ಸರೋಜಮ್ಮ ಕಲ್ಯಾಣ ಮಂಟಪದಲ್ಲಿ ವಿದ್ಯಾರ್ಥಿಗಳಿಗೆ ತಂಗಲು ಅವಕಾಶ ಮಾಡಿಕೊಟ್ಟಿದ್ದಾರೆ.
Advertisement
ಕಲ್ಯಾಣ ಮಂಟಪದಲ್ಲಿ ತಂಗಲು ವ್ಯವಸ್ಥೆ ಮಾಡಿದ್ದರೂ ಇನ್ನುಳಿದ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲೇ ಮಲಗಿಕೊಂಡಿದ್ದು, ಕೊರೆಯುವ ಚಳಿಯಲ್ಲಿ ಬಸ್ ನಿಲ್ದಾಣದಲ್ಲೇ ಕಾಲ ಕಳೆದಿದ್ದಾರೆ. ತಾತ್ಕಾಲಿಕ ಶೌಚಾಲಯ ಕಲ್ಪಿಸುವ ವ್ಯವಸ್ಥೆಯನ್ನು ಇಲ್ಲಿನ ನಗರಸಭೆ ಮಾಡಲಿಲ್ಲ ಎಂದು ಇಲ್ಲದ ನಗರಸಭೆ ವಿರುದ್ಧ ವಿದ್ಯಾರ್ಥಿಗಳ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Advertisement
ಈ ಬಗ್ಗೆ ಮಾಜಿ ಎಂಎಲ್‍ಸಿ ಎಚ್.ಆರ್. ಶ್ರೀನಾಥ್ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದು, ಈ ರೀತಿ ಪೊಲೀಸ್ ನೇಮಕಾತಿಯ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳ ಬಗ್ಗೆ ಪೊಲೀಸರು ಮುಂಚಿತವಾಗಿ ತಿಳಿಸಬೇಕಿತ್ತು. ಆದರೆ ಕೊನೆ ಕ್ಷಣದಲ್ಲಿ ಅವರು ನಮಗೆ ತಿಳಿಸಿದ್ದರು. ಆದ್ದರಿಂದ ತಕ್ಷಣ ಕಲ್ಯಾಣ ಮಂಟಪದಲ್ಲಿ ವ್ಯವಸ್ಥೆ ಮಾಡಲಾಗಿದೆ. ಆದರೆ ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬಂದಿರುವುದರಿಂದ ಶೌಚಾಲಯಗಳ ತೊಂದರೆಯಾಗಿದೆ. ನಾವು ಗಂಗಾವತಿಯವರು ಎಲ್ಲರೂ ಒಟ್ಟಾಗಿ ಸೇರಿ ಸಹಾಯ ಮಾಡುತ್ತಿದ್ದೇವೆ. ಆದರೆ ಶನಿವಾರ ಸಂಜೆ 6ಗಂಟೆಗೆ ಈ ಬಗ್ಗೆ ತಿಳಿಸಿದ್ದಾರೆ. ಮುಂಚಿತವಾಗಿ ಹೇಳಿದ್ದರೆ, ರಾತ್ರಿ ಊಟ, ಬೆಳಗ್ಗೆ ತಿಂಡಿ ವ್ಯವಸ್ಥೆಯನ್ನು ಮಾಡಬಹುದಿತ್ತು. ಆದರೆ ಅದು ಸಾಧ್ಯವಾಗಿಲ್ಲ. ಸದ್ಯಕ್ಕೆ ವಿದ್ಯಾರ್ಥಿಗಳಿಗೆ ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಮುಂಜಾಗ್ರತೆಗಾಗಿ ಇಬ್ಬರು ಎಸ್‍ಪಿ, 11 ಡಿವೈಎಸ್ಪಿ ಸೇರಿದಂತೆ ಸಾಕಷ್ಟು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರಾಜ್ಯಾದ್ಯಾಂತ ಕೇವಲ 517 ಹುದ್ದೆಗಳಿಗೆ ಬರೋಬ್ಬರಿ 4 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ ಅತೀ ಹೆಚ್ಚು ಅಭ್ಯರ್ಥಿ ಕೊಪ್ಪಳದ ಗಂಗಾವತಿಯಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv