ದರ್ಶನ್ ಅಭಿಮಾನಿಗಳ ಬೈಕ್ ರ‍್ಯಾಲಿಗೆ ಪೊಲೀಸ್ ನಿರಾಕರಣೆ

Public TV
1 Min Read
darshan 12

ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ವಿರುದ್ಧ ಠಕ್ಕರ್ ಕೊಡುವುದಕ್ಕಾಗಿ ನಟ ದರ್ಶನ್ (Darshan) ಅಭಿಮಾನಿಗಳು (Fans) ಇಂದು ಬೈಕ್ ರ‍್ಯಾಲಿ (Bike rally) ಏರ್ಪಡಿಸಿದ್ದರು. ಈ ರ‍್ಯಾಲಿಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಹಾಗಾಗಿ ಇಂದು ಬೈಕ್ ರ‍್ಯಾಲಿ ನಡೆಯುವುದು ಅನುಮಾನ ಎಂದು ಹೇಳಲಾಗುತ್ತಿದೆ.

darshan 15

ಇಂದು (ಫೆ.26) `ಡಿ ಬಾಸ್ ಜಿಂದಾಬಾದ್’ ಹೆಸರಲ್ಲಿ ದರ್ಶನ್ ಅಭಿಮಾನಿಗಳಿಂದ ಬೃಹತ್ ಬೈಕ್ ರ‍್ಯಾಲಿ ಏರ್ಪಡಿಸಿದ್ದರು. ಹಾಗಾಗಿ ದರ್ಶನ್- ಉಮಾಪತಿ ಸಮರ ನಿಲ್ಲುತ್ತಿಲ್ಲ. ಉಮಾಪತಿಗೆ (Umapathy) ಪಾಠ ಕಲಿಸಲೆಂದೇ ‘ಒಂಟಿ ಸಲಗ’ ಹೆಸರಲ್ಲಿ ಬೃಹತ್ ರ‍್ಯಾಲಿ ನಡೆಸಲು ದರ್ಶನ್ ಫ್ಯಾನ್ಸ್ ತಯಾರಿ ನಡೆಸಿದ್ದರು. ಡಿಬಾಸ್ ಫ್ಯಾನ್ಸ್ ಟೀಮ್‌ಗೆ ಒಂಟಿ ಸಲಗ ಎಂದು ಹೆಸರಿಟ್ಟಿದ್ದರು.

Darshan 2 1

ರ‍್ಯಾಲಿ ಮಾಡ್ತಿರೋ ಜಾಗವೇ ಗಮನಾರ್ಹವಾಗಿದ್ದು, ಬೊಮ್ಮನಹಳ್ಳಿಯಲ್ಲಿ ಬೃಹತ್ ರ‍್ಯಾಲಿಯಲ್ಲಿ ದರ್ಶನ್ ಸಾವಿರಾರು ಅಭಿಮಾನಿಗಳು ಒಗ್ಗಟ್ಟು ಪ್ರದರ್ಶಿಸಲಿದ್ದರು. ಬೊಮ್ಮನಹಳ್ಳಿ ಮಹಾ ಗಣಪತಿ ದೇವಸ್ಥಾನದಿಂದ ಹೆಚ್‌ಎಸ್‌ಆರ್ ಲೇಔಟ್ ಬಿಡಿಎ ಕಾಂಪ್ಲೆಕ್ಸ್‌ವರೆಗೆ ರ‍್ಯಾಲಿ ನಡೆಯಬೇಕಿತ್ತು. ಉಮಾಪತಿಗೆ ಠಕ್ಕರ್ ಕೊಡಲು ಅವರದ್ದೇ ಕ್ಷೇತ್ರದಲ್ಲಿ ಇಂದು ಸಂಜೆ 6 ಗಂಟೆಗೆ ಡಿಬಾಸ್ ಫ್ಯಾನ್ಸ್ ರ‍್ಯಾಲಿ ಮಾಡಲು ಹೊರಟಿದ್ದರು.

 

ಇತ್ತೀಚೆಗೆ ಉಮಾಪತಿ ಅವರು ದರ್ಶನ್ ನಟನೆಯ ‘ಕಾಟೇರ’ ಸಿನಿಮಾಗೆ ಟೈಟಲ್ ಕೊಟ್ಟಿದ್ದೇ ನಾನು ಎಂದು ಸಂದರ್ಶನಗಳಲ್ಲಿ ಮಾತನಾಡಿದ್ದರು. ಈ ವಿಚಾರಕ್ಕೆ ಕಾಟೇರ ಸಕ್ಸಸ್ ಮೀಟ್‌ನಲ್ಲಿ ದರ್ಶನ್ ಪ್ರತಿಕ್ರಿಯೆ ನೀಡಿದ್ದರು. ಹೇ ತಗಡು ಚಿತ್ರಕ್ಕೆ ‘ಕಾಟೇರ’ ಎಂದು ಟೈಟಲ್ ಇಟ್ಟಿದ್ದೇ ನಾನು ಎಂದು ದರ್ಶನ್ ಉಮಾಪತಿಗೆ ತಿರುಗೇಟು ನೀಡಿದ್ದರು.

Share This Article