ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ (Anant Ambani) ಹಾಗೂ ರಾಧಿಕಾ ಮರ್ಚೆಂಟ್ (Radhika Merchant) ಅವರ ಅದ್ಧೂರಿ ವಿವಾಹ ಮಹೋತ್ಸವ ಕಾರ್ಯಕ್ರಮಕ್ಕೆ ಆಹ್ವಾನವಿಲ್ಲದೇ ಬಂದಿದ್ದ ಇಬ್ಬರು ವ್ಯಕ್ತಿಗಳ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ.
ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಶನ್ ಸೆಂಟರ್‌ನಲ್ಲಿ ವಿವಾಹ ಮಹೋತ್ಸವ ಕಾರ್ಯಕ್ರಮದಲ್ಲಿ ʻಶುಭ ಆಶೀರ್ವಾದʼ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆಯಿಲ್ಲದೇ ಬಂದಿದ್ದ ಇಬ್ಬರು ವ್ಯಕ್ತಿಗಳನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದು, ಕೇಸ್ ದಾಖಲಿಸಿದ್ದಾರೆ. ಇದನ್ನೂ ಓದಿ: ಅನಂತ್ ಅಂಬಾನಿ ವಿವಾಹ ಮಹೋತ್ಸವದಲ್ಲಿ ಮೋದಿ ಭಾಗಿ – ನವ ಜೋಡಿಗೆ ಆಶೀರ್ವದಿಸಿದ ಪ್ರಧಾನಿ!
ಆಹ್ವಾನವಿಲ್ಲದೇ ಪ್ರವೇಶಿಸಿದ್ದ ಆಂಧ್ರಪ್ರದೇಶ ಮೂಲದ ಇಬ್ಬರು ವ್ಯಕ್ತಿಗಳ ಪೈಕಿ ಒಬ್ಬರು ಯೂಟ್ಯೂಬರ್ ವೆಂಕಟೇಶ್ ನರಸಯ್ಯ ಅಲ್ಲೂರಿ (26), ಮತ್ತೊಬ್ಬ ವ್ಯಕ್ತಿ ಲುಕ್ಮಾನ್ ಮೊಹಮ್ಮದ್ ಶಫಿ ಶೇಖ್ (28) ಎಂದು ಗುರುತಿಸಲಾಗಿದೆ. ಶಫಿ ತನ್ನನ್ನು ಉದ್ಯಮಿ ಅಂತ ಹೇಳಿಕೊಂಡು ಜಿಯೋ ವರ್ಲ್ಡ್ ಸೆಂಟರ್‌ಗೆ ಪ್ರವೇಶಿಸಿದ್ದ. ಕೂಡಲೇ ಇಬ್ಬರನ್ನು ವಶಕ್ಕೆ ಪಡೆದ ಮುಂಬೈನ ಬಿಕೆಸಿ ಪೊಲೀಸರು ಇಬ್ಬರ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: 4 ವರ್ಷಗಳಲ್ಲಿ 8 ಕೋಟಿ ಉದ್ಯೋಗ ಸೃಷ್ಟಿ – ಲೆಕ್ಕಕೊಟ್ಟ ಮೋದಿ ವಿರುದ್ಧ ಖರ್ಗೆ ಕಿಡಿ!
ನವದಂಪತಿಗೆ ನಮೋ ಆಶೀರ್ವಾದ:
ಶನಿವಾರ ನಡೆದ ʻಶುಭ ಆಶೀರ್ವಾದʼ ಕಾರ್ಯಕ್ರಮದಲ್ಲಿ (Shubh Ashirwad Ceremony) ದೇಶ-ವಿದೇಶಗಳ ಗಣ್ಯರು, ಸೆಲೆಬ್ರಿಟಿಗಳು, ರಾಜಕಾರಣಿಗಳು ಪಾಲ್ಗೊಂಡಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸಹ ಭಾಗಿಯಾಗಿ ನವದಂಪತಿಗಳಿಗೆ ಆಶೀರ್ವದಿಸಿದರು. ಇದನ್ನೂ ಓದಿ: ಅನಂತ್ ಅಂಬಾನಿ ಮದುವೆ ಸಮಾರಂಭದಲ್ಲಿ ದೀದಿ – ಹರಿದು ಬಂತು ರಾಜಕೀಯ ನಾಯಕರ ದಂಡು!
ರಾಜಕೀಯ ನಾಯಕರ ದಂಡು:
ಅನಂತ್-ರಾಧಿಕಾ ಅದ್ಧೂರಿ ವಿವಾಹ ಮಹೋತ್ಸವದಲ್ಲಿ ಸಿಎಂ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಬಿಹಾರದ ಮಾಜಿ ಡಿಸಿಎಂ ತೇಜಸ್ವಿ ಯಾದವ್, ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್, ಬಿಜೆಪಿ ನಾಯಕಿ ಸ್ಮೃತಿ ಇರಾನಿ ಮತ್ತು ಆರ್‌ಪಿಐ ನಾಯಕ ರಾಮದಾಸ್ ಅಠಾವಳೆ, ಮಾಜಿ ಸಿಎಂ ಉದ್ಧವ್ ಠಾಕ್ರೆ, ಎನ್‌ಸಿಪಿ ಹಿರಿಯ ನಾಯಕಿ ಸುಪ್ರಿಯಾ ಸುಳೆ ಸಹ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: