ನವದೆಹಲಿ: ಸಂಸತ್ ಮುತ್ತಿಗೆಗೆ ಯತ್ನಿಸಿದ ಕಾಕ್ರೋಚ್ ಜನತಾ ಪಾರ್ಟಿ (CJP) ಸದಸ್ಯರ ಮೇಲೆ ಪೊಲೀಸರು ಲಾಠಿಚಾರ್ಜ್(Lathi Charge) ಮಾಡಿದ್ದಾರೆ. ಲಾಠಿಚಾರ್ಜ್ ಬೆನ್ನಲ್ಲೇ ದೆಹಲಿಯ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಂಡಿದೆ.
ಸಂಸತ್ತಿನ ಮುಂಗಾರು ಅಧಿವೇಶನ ಆರಂಭದ ಮೊದಲ ದಿನವಾದ ಇಂದು (ಜುಲೈ 20), ನವದೆಹಲಿಯ ಜಂತರ್ ಮಂತರ್‌ನಿಂದ ಸಂಸತ್ ಭವನದತ್ತ ‘ಚಲೋ ಸಂಸತ್’ (Parliament March) ಮೆರವಣಿಗೆಗೆ ಸಿಜೆಪಿ ಕರೆ ನೀಡಿತ್ತು.
ಕರೆಯ ಬೆನ್ನಲ್ಲೇ ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಸಿಜೆಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಜಂತರ್ ಮಂತರ್‌ನಲ್ಲಿ ಜಮಾಯಿ ಸಂಸತ್ತಿನತ್ತ ತೆರಳಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಕಾರರನ್ನು ತಡೆದರು. ಬ್ಯಾರಿಕೇಡ್‌ಗಳನ್ನು ದಾಟಿ ಮುನ್ನಗ್ಗುತ್ತಿದ್ದಂತೆ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಯೋಗ ಮಾಡಿದ್ದಾರೆ.
#WATCH | Delhi: Saurav Das, Chief Spokesperson, Cockroach Janta Party, exits from the office of the Deputy Commissioner, as protestors have gathered at Jantar Mantar for protest march. pic.twitter.com/koXnIlxQAl
— ANI (@ANI) July 20, 2026
ಮುಂಜಾಗ್ರತಾ ಕ್ರಮವಾಗಿ ದೆಹಲಿ ಪೊಲೀಸರು ಹಾಗೂ ರ‍್ಯಾಪಿಡ್ ಆಕ್ಷನ್ ಫೋರ್ಸ್ (RAF) ಸಿಬ್ಬಂದಿ ಜಂತರ್ ಮಂತರ್ ರಸ್ತೆಯ ಸುತ್ತಲೂ ಬಿಗಿ ಭದ್ರತೆ ಒದಗಿಸಿದ್ದರು. ಪ್ರತಿಭಟನಾಕಾರರು ಪೊಲೀಸ್ ಕಾವಲನ್ನು ಮೀರಿ ಮುನ್ನುಗ್ಗಿದಾಗ, ಪರಿಸ್ಥಿತಿ ಹದ್ದುಬಸ್ತಿಗೆ ತರಲು ಪೊಲೀಸರು ಹಗುರ ಲಾಠಿಚಾರ್ಜ್ ನಡೆಸಿ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ಸಂಸತ್ತಿನ ಅಧಿವೇಶನ ಆರಂಭವಾಗುತ್ತಿರುವುದರಿಂದ ದೆಹಲಿ ನಗರದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ’ಯ (BNSS) ಸೆಕ್ಷನ್ 163 (ಹಳೆಯ 144ನೇ ವಿಧಿ) ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ಮೆರವಣಿಗೆಗೆ ಯಾವುದೇ ಅಧಿಕೃತ ಅನುಮತಿ ನೀಡಿರಲಿಲ್ಲ ಮತ್ತು ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಮುಂಚಿತವಾಗಿಯೇ ಎಚ್ಚರಿಸಿದ್ದರು.
