ಬೆಂಗಳೂರು: ಎಬಿವಿಪಿ ಮತ್ತು ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ನಡುವೆ ಜಗಳವಾಗಿದ್ದು, ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ರಾಯಚೂರಿನಲ್ಲಿ ಅಂಬೇಡ್ಕರ್ ಅವರಿಗೆ ಅವಮಾನವಾದ ಹಿನ್ನೆಲೆ ಬೆಂಗಳೂರು ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಿದರೆ ಇತ್ತ ಮಾಕ್ರ್ಸ್ ಕಾರ್ಡ್, ಫಲಿತಾಂಶ ತಡವಾಗಿ ಬರುತ್ತಿರುವ ಹಿನ್ನೆಲೆ ಎಬಿವಿಪಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆದಿದೆ.
Advertisement
Advertisement
ಪ್ರತಿಭಟನೆ ವೇಳೆ ಎಬಿವಿಪಿ ವಿದ್ಯಾರ್ಥಿಗಳೊಂದಿಗೆ ಸಂಶೋಧನಾ ವಿದ್ಯಾರ್ಥಿಗಳು ವಾಗ್ವಾದ ಇಳಿದಿದ್ದು, ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ವಿಚಾರವೇ ದೊಡ್ಡದು. ದೇಶಕ್ಕಾಗಿ ನೀವು ಬರುವುದಿಲ್ಲ ಮಾಕ್ರ್ಸ್ ಕಾರ್ಡ್, ಫಲಿತಾಂಶ ತಡವಾಗುವುದು ಇದೆಲ್ಲ ಮಾಮೂಲಿಯಾಗಿದೆ. ಇವತ್ತು ನಮ್ಮ ಪ್ರತಿಭಟನೆ ಇದೆ. ನೀವು ನಾಳೆ ಬನ್ನಿ ಅಂತ ಹೇಳಿದ್ದಾರೆ. ಇದನ್ನೂ ಓದಿ: ಫುಟ್‍ಪಾತ್ ಮೇಲೆ ಕಾರು ಚಾಲನೆ – ಅಪ್ರಾಪ್ತನ ಹುಚ್ಚಾಟಕ್ಕೆ ನಾಲ್ವರು ಬಲಿ
Advertisement
ಗಲಾಟೆ ವೇಳೆ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಸಂಶೋಧನಾ ವಿವಿ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
Advertisement
ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳು, ಮನ ಬಂದಂತೆ ತಮ್ಮ ಸ್ನೇಹಿತರನ್ನ ಹಾಸ್ಟೆಲ್‍ನಲ್ಲಿ ಉಳಿಸಿಕೊಳ್ಳುತ್ತಿದ್ದರು. ಇದರಿಂದ ಉಳಿದ ವಿದ್ಯಾರ್ಥಿಗಳಿಗೂ ಸಮಸ್ಯೆಯಾಗುತ್ತಿತ್ತು. ಕೆಲ ಸಂಶೋಧನಾ ವಿದ್ಯಾರ್ಥಿಗಳು ಇದನ್ನು ಪ್ರಶ್ನೆ ಮಾಡಿದರೆ ನೀವು ಜೂನಿಯರಗಳು ಅಂತ ದರ್ಪ ಮಾಡುತ್ತಿದ್ದಾರೆ ಎಂದು ಎಬಿವಿಪಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಈ ವೇಳೆ ಎರಡೂ ವಿದ್ಯಾರ್ಥಿ ಸಂಘಟನೆಗಳ ಸದಸ್ಯರ ವಾಗ್ವಾದ ನಡೆದು ಜಗಳ ನಡೆದಿದೆ. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವುದು ನಮ್ಮ ಗುರಿ: ನಲಪಾಡ್ ಅಧಿಕಾರ ಸ್ವೀಕಾರ
ಕಳೆದ ಎರಡು ದಿನಗಳಿಂದ ಈ ಕುರಿತು ಸಂಶೋಧನಾ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಯುತ್ತಿದೆ. ಆದರೆ ಇಂದು ಎಬಿವಿಪಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾದ ವೇಳೆ ಗಲಾಟೆ ನಡೆದಿದೆ.