ಮೈಸೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ರಾಜಕೀಯ ಪ್ರೇರಿತವಾಗಿ ಈ ಕೊಲೆ ಯತ್ನ ಮಾಡಲಾಗಿದೆ ಎಂಬುದು ತಿಳಿದು ಬಂದಿದೆ.
ಪೊಲೀಸರ ವಿಚಾರಣೆ ವೇಳೆ ಈ ಮಾಹಿತಿ ಬಹಿರಂಗವಾಗಿದೆ. ಈ ಮೊದಲು ತನ್ವೀರ್ ಅವರ ಕೊಲೆ ಯತ್ನದ ಹಿಂದೆ ಸಂಘಟನೆಯೊಂದರ ಕೈವಾಡ ಇದೆ ಎಂಬ ಮಾಹಿತಿ ಲಭ್ಯವಾಗಿತ್ತು. ಆದರೆ ಈಗ ರಾಜಕೀಯ ಪ್ರೇರಿತವಾಗಿ ಈ ಕೊಲೆ ಯತ್ನ ನಡೆದಿದೆ ಎಂಬುದು ತಿಳಿದಿದೆ. ಈಗಾಗಲೇ ಆರೋಪಿ ಫರಾನ್ ಪಾಷಾನನ್ನು ಬಂಧಿಸಿದ್ದು, ಈ ಪ್ರಕರಣ ಸಂಬಂಧ ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮತ್ತಷ್ಟು ವಿಚಾರಣೆ ಮುಂದುವರಿದಿದೆ. ಇದನ್ನೂ ಓದಿ:ತನ್ವೀರ್ ಸೇಠ್ ಹತ್ಯೆ ಯತ್ನಕ್ಕೆ ಬಾಲಿವುಡ್ ಸಿನಿಮಾ ಪ್ರೇರಣೆ
Advertisement
Advertisement
ಪ್ರಕರಣದ ಹಿಂದಿರುವ ವ್ಯಕ್ತಿ ಬಗ್ಗೆ ಪೊಲೀಸರು ಹುಡುಕಾಟ ಆರಂಭಿಸಿದ್ದು, ಕೊಲೆ ಮಾಡಲು ಯತ್ನಿಸುವ ಮೊದಲು ಫರಾನ್ ಸಾಕಷ್ಟು ಪ್ಲಾನ್ ಮಾಡಿಕೊಂಡಿರಲಿಲ್ಲ. ಕೊಲೆ ಮಾಡಬೇಕೆಂದಷ್ಟೆ ನಿರ್ಧಾರ ಮಾಡಿದ್ದನು. ಆದರೆ ಹೇಗೆ? ಯಾವ ರೀತಿ ಕೊಲೆ ಮಾಡಬೇಕು ಎಂಬುದನ್ನು ಪ್ಲಾನ್ ಮಾಡಿರಲಿಲ್ಲ ಎಂಬುದನ್ನು ವಿಚಾರಣೆ ವೇಳೆ ಫರಾನ್ ಬಾಯಿಬಿಟ್ಟಿದ್ದಾನೆ.
Advertisement
Advertisement
ಭಾನುವಾರ ತನ್ವೀರ್ ಸೇಠ್ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಮೈಸೂರು ಪೊಲೀಸರು, ಹಲವಾರು ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದಾರೆ. ಈ ವೇಳೆ ಆರೋಪಿ ತನ್ವೀರ್ ಸೇಠ್ ಅವರ ಮೇಲೆ ಹಲ್ಲೆ ಮಾಡುವ ಮುನ್ನಾ ಬಾಲಿವುಡ್ ಸಿನಿಮಾವೊಂದನ್ನು ಐದಾರು ಬಾರಿ ನೋಡಿದ್ದ ಎಂದು ಆತನ ಸ್ನೇಹಿತರು ಹೇಳಿದ್ದರು. ಇದನ್ನೂ ಓದಿ:‘ಗಣ್ಯರನ್ನು ಕೊಲೆ ಮಾಡಿ ಫೇಮಸ್ ಆಗ್ತೀನಿ’ – ಸ್ನೇಹಿತರ ಬಳಿ ಕೊಚ್ಚಿಕೊಂಡಿದ್ದ ಫರಾನ್
ಆರೋಪಿ ಫರಾನ್ ಪಾಷಾ ತನ್ವೀರ್ ಸೇಠ್ ಅವರ ಹತ್ಯೆಗೆ ಯತ್ನ ಮಾಡುವ ಹಿಂದಿನ ರಾತ್ರಿ ಬಾಲಿವುಡ್‍ನ ‘ವಾಸ್ತವ್’ ಸಿನಿಮಾವನ್ನು ಐದಾರು ಬಾರಿ ನೋಡಿದ್ದ. ಇದು ಬಾಲಿವುಡ್ ನಟ ಸಂಜಯ್ ದತ್ ನಟನೆಯ ಗ್ಯಾಂಗ್ ಸ್ಟಾರ್ ಸಿನಿಮಾವಾಗಿದ್ದು, ಸಿನಿಮಾವನ್ನು ಹಲ್ಲೆ ಮಾಡುವ ಹಿಂದಿನ ರಾತ್ರಿ ಐದಾರು ಬಾರಿ ನೋಡಿದ್ದ ಎಂದು ಆರೋಪಿ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದೇ ಸಿನಿಮಾ ಯಾಕೆ ನೋಡ್ತಿದ್ದೀಯಾ ಎಂದು ಪ್ರಶ್ನಿಸಿದಾಗ ಆ ಸಿನಿಮಾ ಹೀರೋ ಥರ ನಾನು ಆಗಬೇಕು. ನನಗೆ ಇದು ಪ್ರೇರಣೆ ಆಗ್ತಿದೆ ಎಂದು ಫರಾನ್ ಹೇಳಿದ್ದನಂತೆ. ಇದನ್ನೂ ಓದಿ:ತನ್ವೀರ್ ಸೇಠ್ ಕೊಲೆಗೆ ಯತ್ನ – ರಾತ್ರೋರಾತ್ರಿಯೇ ಆರೋಪಿ ಕುಟುಂಬ ಪರಾರಿ
ಭಾನುವಾರ ರಾತ್ರಿ ತನ್ವೀರ್ ಸೇಠ್ ಮೈಸೂರಿನ ಬನ್ನಿ ಮಂಟಪ ಸಮೀಪದ ಪಾರ್ಟಿ ಹಾಲಿಗೆ ತಮ್ಮ ಆತ್ಮೀಯ ಮಗನ ಮದುವೆಯ ಬೀಗರೂಟಕ್ಕೆ ಆಗಮಿಸಿದ್ದರು. ಈ ವೇಳೆ ಯುವಕ ಫರಾನ್ ಚಾಕುವಿನಿಂದ ಹಲ್ಲೆ ಮಾಡಿದ್ದ. ಅವರ ಕತ್ತಿಗೆ ಭಾಗಕ್ಕೆ ಚಾಕು ಹಾಕಿ ಪರಾರಿಯಾಗುತ್ತಿದ್ದ ಆತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ನಂತರ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಸೇಠ್ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.