ಬೆಂಗಳೂರು: ರಾಷ್ಟ್ರೀಯ ಪೌರತ್ವ ತಿದ್ದುಪಡಿ ವಿಚಾರ ಹಿನ್ನೆಲೆಯಲ್ಲಿ ಬೆಂಗಳೂರಿನದ್ಯಾಂತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಅತಿ ಸೂಕ್ಷ್ಮ ಪ್ರದೇಶ ಎಂದು ಗುರುತಿರುವಂತ ಶಿವಾಜಿನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ.
ಶಿವಾಜಿನಗರ ಬಸ್ ನಿಲ್ದಾಣ, ರಸ್ಸೆಲ್ ಮಾರ್ಕೆಟ್, ಇಂಡಿಯನ್ ಎಕ್ಸ್ ಪ್ರೆಸ್ ಎಸ್‍ಕೆಪಿ ದರ್ಗಾ ಸೇರಿದಂತೆ ಬಹುತೇಕ ಕಡೆಗಳಲ್ಲಿ ಕೆಎಸ್‍ಆರ್ ಪಿ, ಸಿಎಆರ್ ಸೇರಿದಂತೆ ಸ್ಥಳೀಯ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆ ಮಾಡಲಾಗಿದೆ.
ಗುಪ್ತಚರ ಇಲಾಖೆ ಮಾಹಿತಿ ಪ್ರಕಾರ ಶಿವಾಜಿನಗರ ಸೇರಿದಂತೆ ಕೆಲ ಏರಿಯಾಗಳಲ್ಲಿ ಸ್ವಲ್ಪ ಹೊತ್ತಿನ ನಂತರ ಪ್ರತಿಭಟನೆಗೆ ಇಳಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತೆ ಕೈಗೊಳ್ಳಲಾಗುವ ಸಾಧ್ಯತೆ ಇದೆ.
ಸದ್ಯ ಶಿವಾಜಿನಗರದಲ್ಲಿ ಜನಜೀವನ ಎಂದಿನಂತೆ ಮುಂದುವರಿದಿದ್ದು, ಯಾವುದೇ ರೀತಿಯ ಮಿತವ್ಯಯ ಕಂಡುಬಂದಿಲ್ಲ.