ಮಂಡ್ಯ: ಕಾವೇರಿ ನೀರು (Cauvery Water) ವಿಚಾರವಾಗಿ ಸುಪ್ರೀಂ ಕೋರ್ಟ್ (Supreme Court) ತೀರ್ಪು ಹಿನ್ನೆಲೆ ಕೆಆರ್ ಎಸ್ ಡ್ಯಾಂ (KRS Dam) ಬಳಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಡ್ಯಾಂನ ಮುಖ್ಯ ದ್ವಾರದಲ್ಲಿ ಬಿಗಿ ಭದ್ರತೆ ಒದಗಿಸಲಾಗುತ್ತಿದೆ. ಯಾಕಂದ್ರೆ ಸುಪ್ರೀಂ ಕೋರ್ಟ್ ತೀರ್ಪು ನೀಡುತ್ತಿದ್ದಂತೆಯೇ ಮಂಡ್ಯದಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ.
Advertisement
Advertisement
ಕೆಆರ್‍ಎಸ್ ಪಕ್ಷದಿಂದ ಪ್ರತಿಭಟನೆ ನಡೆಯುತ್ತಿದ್ದು, ಬೈಕ್ ರ್ಯಾಲಿ ಮೂಲಕ ಆಕ್ರೋಶ ಹಾಕುತ್ತಿದ್ದಾರೆ. ಇತ್ತ ಹಿರಿಯ ಜೀವಗಳು ಕಣ್ಣೀರು ಹಾಕುತ್ತಾ ಆಕ್ರೋಶದ ಮಾತುಗಳನ್ನು ಹೊರಹಾಕುತ್ತಿದ್ದಾರೆ. ಇನ್ನೊಂದೆಡೆ ರೈತಪರ, ಕನ್ನಡಪರ, ಪ್ರಗತಿಪರ ಸಂಘಟನೆಗಳು ಮಂಡ್ಯದಲ್ಲಿ ಬೆಂ-ಮೈ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿವೆ. ಅಲ್ಲದೆ ಸುಪ್ರೀಂಕೋರ್ಟ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿವೆ.
Advertisement
Advertisement
ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ನುಸುಳಿ ಹೋಗುತ್ತಿದ್ದ ಕಾರು ಚಾಲಕನಿಗೆ ರೈತರು ಫುಲ್ ಕ್ಲಾಸ್ ತೆಗೆದುಕೊಂಡ ಪ್ರಸಂಗ ಕೂಡ ನಡೆದಿದೆ. ಕುಡಿಯೋ ನೀರಿಗಾಗಿ ನಾವು ಪ್ರತಿಭಟನೆ ಮಾಡ್ತಾ ಇದ್ದೀವಿ. ಎಲ್ಲಿಗೆ ಹೋಗ್ತಾ ಇದ್ದೀಯಾ ಎಂದು ಕ್ಲಾಸ್ ಮಾಡಿದ್ದಾರೆ. ಕಾವೇರಿ ನೀರು ಇಲ್ಲದಿದ್ದೇರೆ ಏನ್ ಆಗುತ್ತೆ ಎಂದು ಬಣ್ಣಿಸಿ ಹಾಡಿನ ಮೂಲಕ ವಿಭಿನ್ನ ಪ್ರತಿಭಟನೆಗಳು ನಡೆಯುತ್ತಿವೆ.
ಕೋರ್ಟ್ ಹೇಳಿದ್ದೇನು..?: ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಆ ಮೂಲಕ ರಾಜ್ಯಕ್ಕೆ ಸರ್ವೋಚ್ಚ ನ್ಯಾಯಾಲಯದಲ್ಲೂ ಹಿನ್ನಡೆಯಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕರ್ನಾಟಕ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಇಂದು (ಗುರುವಾರ) ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಾಧಿಕಾರದ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
Web Stories