ರಾಯ್ಪುರ: ಓಡಿಶಾ-ಛತ್ತೀಸ್‍ಗಢ (Chhattisgarh) ಗಡಿಯಲ್ಲಿ ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯ ವೇಳೆ ಪೊಲೀಸರು ನಕ್ಸಲರ ಅಡಗುತಾಣದಿಂದ ಕಾಂಡೋಮ್‍ಗಳು (Condoms), ಗರ್ಭ ನಿರೋಧಕ ಮಾತ್ರೆ (Contraceptive Pills) ಹಾಗೂ ಗರ್ಭಧಾರಣೆಯ ಪರೀಕ್ಷಾ ಕಿಟ್‍ಗಳನ್ನು (Pregnancy Test Kits) ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಛತ್ತೀಸ್‍ಗಢದ ಗಡಿಯಲ್ಲಿರುವ ನಬರಂಗಪುರ ಜಿಲ್ಲೆಯ ರಾಯ್ಘರ್ ಪ್ರದೇಶದಲ್ಲಿ ಯೋಧರು ನಕ್ಸಲರ ವಿರೋಧಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ನಕ್ಸಲರ ಶಿಬಿರದಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Advertisement
Advertisement
ಘಟನೆಯೇನು?: ನಬರಂಪುರದ ಪೂರ್ವ ಭಾಗದ ಉದಾಂತಿ ಅರಣ್ಯದ ಸೈಬಿನ್ ಕಚಾರ್ ಗ್ರಾಮದಲ್ಲಿ ಶಸ್ತ್ರಸಜ್ಜಿತ 20 ರಿಂದ 25 ಸಿಪಿಐ ಮಾವೋವಾದಿಗಳ ಗುಂಪು ಇರುವುದರ ಬಗ್ಗೆ ಪೊಲೀಸರು ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ್ದರು. ಪೊಲೀಸರು ಬರುತ್ತಿರುವುದನ್ನು ಗಮನಿಸಿದ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ರಕ್ಷಣೆಗಾಗಿ ಮರು ದಾಳಿ ನಡೆಸಿದ್ದಾರೆ. ಸುಮಾರು ಅರ್ಧ ಗಂಟೆ ಕಾಲ ಗುಂಡಿನ ಚಕಮಕಿ ಮುಂದುವರಿದಿದೆ. ಈ ವೇಳೆ ದಟ್ಟ ಅರಣ್ಯದ ಲಾಭ ಪಡೆದ ನಕ್ಸಲರು ಸ್ಥಳದಿಂದ ಪರಾರಿಯಾಗಿದ್ದಾರೆ.
Advertisement
Advertisement
ಈ ವೇಳೆ ನಕ್ಸಲ ಶಿಬಿರದಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಕ್ಸಲರ ಅಡಗು ತಾಣದಲ್ಲಿ ಕಾಂಡೋಮ್‍ಗಳು, ಗರ್ಭನಿರೋಧಕ ಮಾತ್ರಗಳು ಹಾಗೂ ಗರ್ಭಧಾರಣೆಯ ಪರೀಕ್ಷೆಯ ಕಿಟ್‍ಗಳು ಕಂಡುಬಂದಿವೆ. ಜೊತೆಗೆ 2 ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ.
ಶಿಬಿರದಲ್ಲಿ ನಕ್ಸಲರ ಕರಪತ್ರಗಳು, ಬ್ಯಾನರ್‌ಗಳು, ಡಿಟೋನೇಟರ್‌ಗಳು ಮತ್ತು ಆಹಾರ ಪದಾರ್ಥಗಳು ಸಹ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಏ.30ಕ್ಕೆ ಚನ್ನಪಟ್ಟಣಕ್ಕೆ ಮೋದಿ – ದಶಪಥ ಹೆದ್ದಾರಿ ಮಾರ್ಗ ಬದಲಾವಣೆ
ಮಾವೋವಾದಿ ಶಿಬಿರಗಳಲ್ಲಿ ಮಹಿಳೆಯರನ್ನು ಲೈಂಗಿಕವಾಗಿ ಶೋಷಣೆ ಮಾಡಲಾಗುತ್ತಿದೆ ಎಂಬುದಕ್ಕೆ ಸಾಕಷ್ಟು ಪುರಾವೆಗಳಿವೆ ಎಂದು ಅಲ್ಲಿನ ಎಸ್ಪಿ ಹೇಳಿದರು. ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್ ಪ್ರಯಾಣ – ಕಾಂಗ್ರೆಸ್‍ನಿಂದ 5ನೇ ಗ್ಯಾರಂಟಿ ಘೋಷಣೆ