ಕೋಲಾರ: ನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ರಾಜ್ಯದ ಹಲವೆಡೆ ದ್ವಿಚಕ್ರ ವಾಹನ ಕದಿಯುತ್ತಿದ್ದ ಬೈಕ್ ಕಳ್ಳನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶ್ರೀನಿವಾಸಪುರದ ಶೇಖ್ ಯಾಸೀನ್ ಅರ್ಪತ್ ಬಂಧಿತ ಆರೋಪಿ. ಈತ ಮೆಕ್ಯಾನಿಕ್ ಆಗಿದ್ದು, ನಕಲಿ ಕೀಲಿಗಳನ್ನ ಬಳಸಿಕೊಂಡು ಬೈಕ್ ಗಳನ್ನ ಕದಿಯುತ್ತಿದ್ದ ಎನ್ನಲಾಗಿದೆ. ಜೊತೆಗೆ ಹಲವು ಜಿಲ್ಲೆಗಳಲ್ಲಿ ಕದ್ದ ಬೈಕ್ ಗಳನ್ನ ಬೆಂಗಳೂರು ಸೇರಿದಂತೆ ವಿವಿಧೆಡೆ ಮಾರಾಟ ಮಾಡುತ್ತಿದ್ದ ಎಂದು ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.
Advertisement
Advertisement
ಸದ್ಯ ಬಂಧಿತನಿಂದ 10 ಲಕ್ಷ ರೂಪಾಯಿ ಮೌಲ್ಯದ 15 ದ್ವಿಚಕ್ರ ವಾಹನಗಳನ್ನ ನಗರ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ. ವಶದಲ್ಲಿರುವ ಆರೋಪಿಯನ್ನ ಪೊಲೀಸರು ಮತ್ತಷ್ಟು ವಿಚಾರಣೆ ನಡೆಸುತ್ತಿದ್ದಾರೆ.
Advertisement
ಬಂಧಿತನಿಂದ ವಶಪಡಿಸಿಕೊಂಡ ಬೈಕ್ ಗಳನ್ನ ಕೋಲಾರ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಕಳವು ಮಾಡಿದ್ದ ಆರೋಪಿಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಕೋಲಾರ ಎಸ್.ಪಿ ರೋಹಿಣಿ ಕಟೋಜ್ ಹೇಳಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv