BelgaumDistrictsKarnatakaLatestMain Post

ಬೆಳಗಾವಿಯ ಮಿಡಕನಟ್ಟಿಯಲ್ಲಿ 2.58 ಲಕ್ಷ ಮೌಲ್ಯದ ಗಾಂಜಾ ಬೆಳೆ ವಶಕ್ಕೆ

ಬೆಳಗಾವಿ: ಜಿಲ್ಲೆಯ ಮಿಡಕನಟ್ಟಿಯಲ್ಲಿ 2.58 ಲಕ್ಷ ಮೌಲ್ಯದ ಗಾಂಜಾ ಬೆಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಮಿಡಕನಟ್ಟಿ ಗ್ರಾಮದ ಗದ್ದೆಯಲ್ಲಿ ಗಾಂಜಾ ಬೆಳೆಯಲಾಗಿತ್ತು. ಈ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿ ಬೆಳೆಯನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಗಾಂಜಾ ಬೆಳೆದಿದ್ದ ಪರಪ್ಪ ಸವಸುದ್ದಿಯನ್ನು ಬಂಧಿಸಿದ್ದಾರೆ.

ಬೆಳಗಾವಿ ಡಿಸಿಆರ್‍ಬಿ, ಸಿಇಎನ್ ಹಾಗೂ ಗೋಕಾಕ್ ಗ್ರಾಮೀಣ ಠಾಣೆಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಇದೇ ವೇಳೆ 2 ಲಕ್ಷ 58 ಸಾವಿರ ಮೌಲ್ಯದ 25 ಕೆ.ಜಿ 800 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಬಂಧ ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್‍ಗೆ ಪಿತೃ ವಿಯೋಗ

Leave a Reply

Your email address will not be published.

Back to top button