– ಹಡಗಿನ ಮೂಲಕ ವಿದೇಶಕ್ಕೆ ಸಾಗಿಸುವ ಮಾಸ್ಟರ್ ಪ್ಲಾನ್ ವಿಫಲ
ಮಂಗಳೂರು: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಬರೋಬ್ಬರಿ 2 ಕೋಟಿ ರೂ. ಮೌಲ್ಯದ ರಕ್ತಚಂದನವನ್ನು ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ.
ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರಿಯಲ್ ಎಸ್ಟೇಟ್‍ನ ಕಟ್ಟಡವೊಂದರಲ್ಲಿ ಅಕ್ರಮವಾಗಿ ರಕ್ತಚಂದನವನ್ನು ದಾಸ್ತಾನು ಇರಿಸಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಪಣಂಬೂರು ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ 4 ಸಾವಿರ ಕೆಜಿ ರಕ್ತಚಂದನ ಪತ್ತೆಯಾಗಿದೆ.
Advertisement
Advertisement
ರಕ್ತಚಂದನವನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಶೇಖ್ ತಬ್ರೇಜ್ (35), ರಾಕೇಶ್ ಶೆಟ್ಟಿ (44), ಲೋಹಿತ್ (36), ಫಾರೂಕ್ (45), ಹುಸೇನ್ ಕುಂಞ (46) ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಈ ರಕ್ತ ಚಂದನವನ್ನು ಮಂಗಳೂರಿನ ಎನ್‍ಎಂಪಿಟಿ ಬಂದರು ಮೂಲಕ ವಿದೇಶಕ್ಕೆ ಸಾಗಿಸಲು ತಯಾರಿ ನಡೆಸಿದ್ದು, ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ. ಆರೋಪಿಗಳಿಂದ ರಕ್ತಚಂದನ, ಬ್ರೀಝಾ, ಮಾರುತಿ ಕಾರು ಸಹಿತ ಒಟ್ಟು 2.20 ಕೋಟಿ ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.