ಹಾಸನ: ಗಲಾಟೆ ಮಾಡಬೇಡಿ ಎಂದು ಬುದ್ದಿ ಹೇಳಿದ್ದಕ್ಕೆ ಪೊಲೀಸ್ ಕಾನ್ಸ್‌ಟೇಬಲ್‌ಗೆ (Police) ದುಷ್ಕರ್ಮಿಗಳು ಚಾಕುವಿನಿಂದ ಇರಿದಿರುವ ಘಟನೆ ಹಾಸನದ (Hassan) ದಾಸರಕೊಪ್ಪಲಿನಲ್ಲಿ ನಡೆದಿದೆ. ಲೋಹಿತ್ ಗಾಯಗೊಂಡಿರುವ ಪೊಲೀಸ್ ಕಾನ್ಸ್‌ಟೇಬಲ್.
ಲೋಹಿತ್ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅವರು ತಮ್ಮ ಸಂಬಂಧಿಕರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಹಾಸನದ ದಾಸರಕೊಪ್ಪಲಿಗೆ ಬಂದಿದ್ದರು. ಸಾವಿನ ಮನೆಯ ಬಳಿ ಕೆಲ ಯುವಕರು ಗಲಾಟೆ ಮಾಡುತ್ತಿದ್ದು, ಈ ವೇಳೆ ಕಾನ್ಸ್‌ಟೇಬಲ್ ಲೋಹಿತ್ ಇಲ್ಲಿ ಗಲಾಟೆ ಮಾಡಬೇಡಿ ಎಂದು ಯುವಕರಿಗೆ ಬುದ್ಧಿ ಹೇಳಿ ಕಳುಹಿಸಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿಗೆ ಹನಿಟ್ರ್ಯಾಪ್ ಯತ್ನ!
ತಕ್ಷಣಕ್ಕೆ ಯುವಕರು ಆ ಸ್ಥಳದಿಂದ ತೆರಳಿದ್ದು, ಮತ್ತೆ ವಾಪಸ್ ಬಂದು ಕಾನ್ಸ್‌ಟೇಬಲ್ ಲೋಹಿತ್‌ಗೆ ಚಾಕುವಿನಿಂದ ಇರಿದಿದ್ದಾರೆ. ಗಾಯಾಳು ಕಾನ್ಸ್‌ಟೇಬಲ್ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಇದೀಗ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಹಾಸನ ಭಾಗದಲ್ಲಿ ಕಾಡಾನೆಗಳ ದಾಳಿಗೆ ಸರಣಿ ಬಲಿ- ವ್ಯಕ್ತಿ ಶವವಿಟ್ಟು ಪ್ರತಿಭಟನೆ
ಘಟನೆ ಸಂಬಂಧ ಆರೋಪಿಗಳಾದ ಪ್ರಕಾಶ್ ಹಾಗೂ ಪುನೀತ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.