ಹುಬ್ಬಳ್ಳಿ: ಗಂಡ-ಹೆಂಡತಿ ಜಗಳದ ನಡುವೆ ಪೊಲೀಸರ ಸಂಧಾನಕ್ಕೆ ಬೇಸತ್ತು ಪತಿ ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿ ಕೋಟಿಲಿಂಗೇಶ್ವರ (Kotlingeshwara) ನಗರದಲ್ಲಿ ನಡೆದಿದೆ.
ನಿಖಿಲ್ (28) ಆತ್ಮಹತ್ಯೆ ಮಾಡಿಕೊಂಡ ಪತಿ. 11 ತಿಂಗಳ ಹಿಂದೆ ನಿಖಿಲ್, ಪ್ರೀತಿ ಎಂಬ ಯುವತಿಯನ್ನು ಮದುವೆಯಾಗಿದ್ದರು. ಆದರೆ ಗಂಡ-ಹೆಂಡತಿ ನಡುವೆ ಆರಂಭದಿಂದಲೂ ಸಾಮರಸ್ಯ ಮೂಡದೇ ವೈಮನಸ್ಸು ಬೆಳೆದು ನಿತ್ಯ ಜಗಳವಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಇದರಿಂದಾಗಿ ಪ್ರೀತಿ ತವರು ಮನೆಗೆ ಹೋಗಿದ್ದಳು.
ನನ್ನ ಸಹೋದರನ ಆತ್ಮಹತ್ಯೆಗೆ ಪತ್ನಿ ಪ್ರೀತಿ ಕುಟುಂಬಸ್ಥರು ಮತ್ತು ಪೊಲೀಸರೇ ಕಾರಣ: ನಿಖಿಲ್ ಸಹೋದರ ರಘುವೀರ #Hubballi #Police #KarnatakaPolice @DgpKarnataka @DrParameshwara pic.twitter.com/wWxzt8dw16
— PublicTV (@publictvnews) November 3, 2023
ನಿಖಿಲ್ ಪತ್ನಿ ಪ್ರೀತಿ ಮತ್ತು ಕುಟುಂಬಸ್ಥರು ಗುರುವಾರ ಕೇಶ್ವಾಪುರ ಠಾಣೆಗೆ ನಿಖಿಲ್ ಕರೆಸಿ ಬೆದರಿಕೆ ಹಾಕಿರುವ ಆರೋಪ ಕೂಡ ಕೇಳಿಬಂದಿದೆ. ನೋಟಿಸ್ ನೀಡಿ ನಿಖಿಲ್ನನ್ನು ಠಾಣೆ ಕರೆಸಿ ಪೊಲೀಸರು ಮಾನಸಿಕ ಕಿರುಕುಳ ನೀಡಿದ್ದಾರೆ. ಒಂದೇ ದಿನದಲ್ಲಿ 2 ಲಕ್ಷ ರೂಪಾಯಿ ನೀಡುವಂತೆ ತಾಕೀತು ಮಾಡಿ ಪೊಲೀಸರು ನಿಖಿಲ್ನನ್ನು ಬಿಟ್ಟು ಕಳುಹಿಸಿದ್ದರು. ಇದನ್ನೂ ಓದಿ: ನಾನು ಯಾವತ್ತೂ ಮಂಡ್ಯ ಬಿಡಲ್ಲ, ರಕ್ತದಲ್ಲಿ ಬರೆದು ಕೊಡಬೇಕಾ: ಸುಮಲತಾ ಪ್ರಶ್ನೆ
ಇದರಿಂದ ಮನನೊಂದು ಮನೆಗೆ ಬಂದ ನಿಖಿಲ್ ಇಂದು ಬೆಳಗ್ಗಿನ ಜಾವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ಸಹೋದರ ರಘುವೀರ್ ಗಂಭೀರ ಆರೋಪ ಮಾಡುತ್ತಿದ್ದಾರೆ. ನಿಖಿಲ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Web Stories