Connect with us

Crime

ಗೋ ಹತ್ಯೆ ಆರೋಪಿಸಿ ಗುಂಪು ಘರ್ಷಣೆ

Published

on

– ಉತ್ತರ ಪ್ರದೇಶದಲ್ಲಿ ಕಲ್ಲು ತೂರಿ ಪೊಲೀಸ್ ಇನ್ಸ್​ಪೆಕ್ಟರ್ ಸೇರಿ ಇಬ್ಬರ ಹತ್ಯೆ

ಲಕ್ನೋ: ಉತ್ತರ ಪ್ರದೇಶದ ಬುಲಂದಶಹರ್ ನಲ್ಲಿ ಗೋ ಹತ್ಯೆ ಸಂಬಂಧ ಆರಂಭವಾದ ಘಟನೆ ವಿಕೋಪಕ್ಕೆ ತಿರುಗಿದ್ದು, ಗಲಾಟೆಯಲ್ಲಿ ಓರ್ವ ಎಸ್‍ಐ ಸೇರಿದಂತೆ ಇಬ್ಬರ ಹತ್ಯೆ ನಡೆದಿದೆ. ಘಟನೆಯಲ್ಲಿ ಹಲವು ಪೊಲೀಸ್ ಪೇದೆಗಳು ಮತ್ತು ಪ್ರತಿಭಟನಾಕಾರರು ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬುಲಂದ್‍ಷಹರ್ ಗ್ರಾಮದ ಹೊರವಲಯದಲ್ಲಿ ಪ್ರಾಣಿಯ ಪಳಿಯುಳಿಕೆ ಪತ್ತೆಯಾಗಿದ್ದವು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಕೆಲ ಬಲಪಂಥಿಯ ಮುಖಂಡರು ಮತ್ತು ಗ್ರಾಮಸ್ಥರು ಸಯನಾ ರೋಡ್ ಬಂದ್ ಮಾಡಿ ಪ್ರತಿಭಟನೆಗೆ ಮುಂದಾದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ರಸ್ತೆ ಸಂಚಾರ ಸುಗಮಗೊಳಿಸಲು ಪ್ರಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ಆರಂಭವಾಯಿತು.

ಪ್ರತಿಭಟನಾಕಾರು ಪತ್ತೆಯಾಗಿದ್ದ ಪ್ರಾಣಿಗಳ ಪಳಿಯುಳಿಕೆಯನ್ನು ಟ್ರಾಲಿಯನ್ನು ತುಂಬಿಕೊಂಡು ಬಂದು ಚಿಂಗಾರವಾಡಿ ಪೊಲೀಸ್ ಠಾಣೆಯೆದರು ತಂದು ನಿಲ್ಲಿಸಿದ್ದಾರೆ. ಈ ಗಲಾಟೆಯಲ್ಲಿ ಕರ್ತವ್ಯ ನಿರತ ಪೊಲೀಸ್ ಇನ್ಸ್ ಪೆಕ್ಟರ್ ಸುಬೋಧ್ ಕುಮಾರ್ ಮತ್ತು ಮತ್ತೋರ್ವ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ ಅಧಿಕಾರಿ ತಿಳಿಸಿದ್ದಾರೆ.

ಪ್ರತಿಭಟನಾ ಸ್ಥಳ ಬೂದಿ ಮುಚ್ಚಿದ ಕೆಂಡದಂತಿದ್ದು, ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಸದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಘಟನೆ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋಧನಕಾರಿ ಸಂದೇಶಗಳನ್ನು ಹರಿ ಬಿಡಬಾರರು. ಸಾರ್ವಜನಿಕರು ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದೆಂದು ಬುಲಂದ್‍ಷಹರ್ ಎಸ್.ಎಸ್.ಪಿ. ಕೆಬಿ ಸಿಂಗ್ ಮನವಿ ಮಾಡಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Click to comment

Leave a Reply

Your email address will not be published. Required fields are marked *