ಶ್ರೀನಗರ: ಉಗ್ರಗಾಮಿಗಳ ಗುಂಡಿಗೆ ಜಮ್ಮು ಕಾಶ್ಮೀರದ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ.
ತೌಸೀಫ್ ಅಹಮದ್ ಹುತಾತ್ಮ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ಶ್ರೀನಗರದ ಬಾಟ್‍ಮಲೂ ಪ್ರದೇಶದಲ್ಲಿ ಭಯೋತ್ಪಾದಕರ ಗುಂಡಿಗೆ ಹುತಾತ್ಮರಾಗಿದ್ದಾರೆ.
Advertisement
Advertisement
ಜಮ್ಮು ಕಾಶ್ಮೀರ ಪೊಲೀಸ್ ಇಲಾಖೆಯ ಕಾನ್‍ಸ್ಟೆಬಲ್ ತೌಸೀಫ್ ಅಹಮದ್ ಅವರ ಮೇಲೆ ಅವರ ಮನೆಯ ಹತ್ತಿರವೇ ರಾತ್ರಿ 8 ಗಂಟೆಗೆ ಉಗ್ರರು ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಕಾನ್‍ಸ್ಟೆಬಲ್ ತೌಸೀಫ್ ಅವರನ್ನು ತಕ್ಷಣವೇ ಎಸ್‍ಎಂಎಚ್‍ಎಸ್ ಆಸ್ಪತ್ರೆಗೆ ಕರೆದೊಯ್ಯವ ವೇಳೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದರು. ಈ ಪ್ರದೇಶದಲ್ಲಿ ಸಂಪೂರ್ಣವಾಗಿ ನಿಬರ್ಂಧ ಆದೇಶ ಜಾರಿಗೊಳಿಸಲಾಗಿದ್ದು, ಭಯೋತ್ಪಾದಕನ್ನು ಪತ್ತೆಹಚ್ಚಲು ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್‍ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ
Advertisement
Advertisement
ಜಮ್ಮು ಕಾಶ್ಮೀರದ ಶ್ರೀನಗರದ ಆಸ್ಪತ್ರೆಯೊಂದರಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಕೆಲ ಕಾಲ ಗುಂಡಿನ ಚಕಮಕಿ ನಡೆಯಿತು. ಆಸ್ಪತ್ರೆಯಲ್ಲೇ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಗಳು ಸ್ಥಳಕ್ಕೆ ದೌಡಾಯಿಸಿವೆ. ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ ನಗರದ ಬೆಮಿನಾ ಪ್ರದೇಶದ ಎಸ್‍ಕೆಐಎಂಎಸ್ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಬೆಮಿನಾದ SKIMS ಆಸ್ಪತ್ರೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಸ್ವಲ್ಪ ಸಮಯದ ಗುಂಡಿನ ಚಕಮಕಿ ನಡೆಯಿತು. ಆ ಆಸ್ಪತ್ರೆಯ ಸುತ್ತ ಸೇರಿದ್ದ ಜನಸಂದಣಿಯ ಲಾಭವನ್ನು ಪಡೆದುಕೊಂಡು ಭಯೋತ್ಪಾದಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶ್ರೀನಗರ ಪೊಲೀಸರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.