ಚಾಮರಾಜನಗರ: ಐಟಂ ಸಾಂಗ್‍ಗೆ ಪೊಲೀಸ್ ಅಧಿಕಾರಿಗಳು ಕುಣಿದು ಕುಪ್ಪಳಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ಡ್ಯಾನ್ಸ್ ಬಗ್ಗೆ ಪರ-ವಿರೋಧದ ಬಗ್ಗೆ ಚರ್ಚೆ ನಡೆಯುತ್ತಿದೆ. ಕೊಳ್ಳೇಗಾಲ DYSP ನಾಗರಾಜು, ಪೊಲೀಸ್ ಇನ್ಸ್‌ಪೆಕ್ಟರ್ ಶಿವರಾಜ್ ಮುದೋಳ್ PSI ಚೇತನ್ ಹಾಗು ಸಹೋದ್ಯೋಗಿ ಪೊಲೀಸ್ ಸಿಬ್ಬಂದಿಗಳು ನೃತ್ಯ ಮಾಡಿದ್ದಾರೆ.
Advertisement
ಐಟಂ ಸಾಂಗ್ ಕುಣಿತದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಸಬ್ ಇನ್ಸ್‍ಪೆಕ್ಟರ್ ಅಶೋಕ್ ವರ್ಗಾವಣೆ ಹಿನ್ನೆಲೆ, ಖಾಸಗಿ ರೆಸಾರ್ಟ್‍ನಲ್ಲಿ ಬೀಳ್ಕೊಡುಗೆ ಪಾನಗೋಷ್ಠಿ ನಡೆಸಲಾಗಿದೆ. ಈ ಬೀಳ್ಕೊಡುಗೆ ಪಾರ್ಟಿಯಲ್ಲಿ ಮದ್ಯದ ನಶೆಯಲ್ಲಿ ಪೊಲೀಸ್ ಅಧಿಕಾರಿಗಳು ತೇಲಾಡಿದ್ದಾರೆ. ಇದನ್ನೂ ಓದಿ: ಉಕ್ರೇನ್ ನಿರಾಶ್ರಿತರಿಗಾಗಿ ಅಪ್ಲಿಕೇಶನ್ ರೆಡಿ ಮಾಡಿದ 15ರ ಭಾರತೀಯ ಬಾಲಕ
Advertisement
Advertisement
ಪೊಲೀಸ್ ಅಧಿಕಾರಿಗಳಿಂದ ಅಸಭ್ಯ ರೀತಿಯಲ್ಲಿ ನೃತ್ಯ ಮಾಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಸರ್ಕಾರಿ ನೌಕರರಿಗೆ ತರವಲ್ಲದ ವರ್ತನೆ ಮಾಡಿದ್ದಾರೆಂಬ ಆರೋಪವಿದೆ. ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಪೊಲೀಸ್ ಮ್ಯಾನುವೆಲ್ ಪ್ರಕಾರ ಶಿಸ್ತು ಪಾಲಿಸದೆ ಅಶಿಸ್ತು ಪ್ರದರ್ಶನ ಮಾಡಿದ್ದಾರೆ. ಕರ್ನಾಟಕ ಸೇವಾ ನಡೆತೆ ನಿಯಮ ಉಲ್ಲಂಘನೆಯಾಗಿದೆ ಎಂದು ಪರ ವಿರೋಧ ಚರ್ಚೆಯಾಗ್ತಿದೆ.