ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧನವಾಗಿರುವ ಮುರುಘಾ ಶ್ರೀಗಳ ವಿಚಾರದಲ್ಲಿ ರಾಜಕೀಯ ಪಕ್ಷಗಳು ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ.
Advertisement
ಮೊದಲು ಬಿ.ಎಸ್ ಯಡಿಯೂರಪ್ಪ ಸೇರಿ ಬಿಜೆಪಿಯ ಹಲವರು ಸ್ವಾಮೀಜಿ ಪರ ಬಹಿರಂಗವಾಗಿ ಬ್ಯಾಟ್ ಬೀಸಿದ್ರು. ಆದ್ರೆ, ಸಾರ್ವಜನಿಕವಾಗಿ ಆಕ್ರೋಶ ಹೆಚ್ಚಾದ ಬೆನ್ನಲ್ಲೇ ಹೈಕಮಾಂಡ್ ಅಲರ್ಟ್ ಆಗಿದೆ. ಶಿವಮೂರ್ತಿ ಶ್ರೀಗಳನ್ನು ವಹಿಸಿಕೊಂಡು ಮಾತನಾಡಬೇಡಿ. ವಿರೋಧಿಸಿಯೂ ಮಾತನಾಡಬೇಡಿ. ಕಾನೂನು ಪ್ರಕಾರ ಎಲ್ಲಾ ನಡೆಯಲಿ ಎಂಬ ಸಂದೇಶವನ್ನು ರವಾನಿಸಿದೆ. ಅದಕ್ಕೆ ತಕ್ಕಂತೆಯೇ ಇಂದು ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಮುರುಘಾ ಶ್ರೀ 4 ದಿನ ಪೊಲೀಸ್ ಕಸ್ಟಡಿಗೆ
Advertisement
Advertisement
ಕಾಂಗ್ರೆಸ್ ಕೂಡ ಈ ವಿಚಾರದಲ್ಲಿ ಅಂತರ ಕಾಯ್ದುಕೊಂಡಿದೆ. ಯಾವ ರೀತಿ ಹೇಳಿಕೆ ನೀಡಿದ್ರೆ ಏನಾಗುತ್ತೋ ಎಂಬ ಆತಂಕ, ಗೊಂದಲ ಕಾಂಗ್ರೆಸ್ಸಿಗರಲ್ಲಿ ಕಾಣುತ್ತಿದೆ. ರಾಜಕೀಯ ಲಾಭ ನಷ್ಟದ ಲೆಕ್ಕಾಚಾರ ಹಾಕಿದಂತೆ ಕಂಡುಬರುತ್ತಿದೆ. ಚಿತ್ರದುರ್ಗದ ಮುರುಘಾ ಮಠದ ಸ್ವಾಮಿಗಳ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆ. ಪೊಲೀಸರು ಯಾವುದೇ ಒತ್ತಡಕ್ಕೊಳಗಾಗದೆ ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗಗೊಳಿಸಬೇಕು ಎಂದಷ್ಟೇ ಸಿದ್ದರಾಮಯ್ಯ ಟ್ವೀಟಿಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡುತ್ತಾ ಇದು ಸೂಕ್ಷ್ಮ ವಿಚಾರ. ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಳ್ಳಲಿ ಎಂದಿದ್ದಾರೆ. ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಮೋದಿ ವಿರುದ್ಧ ಆಕ್ರೋಶ – ಮೋದಿ ಮೋಸ, ಗೋ ಬ್ಯಾಕ್ ಮೋದಿ ಅಭಿಯಾನ