ನವದೆಹಲಿ: ಇವಿಎಂ ದುರ್ಬಳಕೆ ಆಗುತ್ತಿದೆ ಎಂದು ಆರೋಪಿಸುತ್ತಿರುವ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ, ಪಂಚರಾಜ್ಯಗಳ ಚುನಾವಣೆಯಲ್ಲಿ ಬಳಕೆಯಾದ ಇವಿಎಂ ನೀಡುತ್ತೇವೆ. ನಿಮ್ಮ ಆರೋಪವನ್ನು ಸಾಬೀತು ಪಡಿಸಿ ಎನ್ನುವ ಆಫರ್ ನೀಡಿದೆ.
ಇವಿಎಂ ದುರ್ಬಳಕೆ ಆಗುತ್ತಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಚುನವಣಾ ಆಯೋಗ ಸರ್ವಪಕ್ಷಗಳ ಸಭೆಯನ್ನು ನಡೆಸಿತು. ಈ ಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ನಸೀಂ ಜೈದಿ, ನಿಮ್ಮ ಆರೋಪವನ್ನು ದೃಢಪಡಿಸಲು ಇತ್ತೀಚಿಗೆ ಮುಕ್ತಾಯಗೊಂಡ ಪಂಚರಾಜ್ಯಗಳ ಚುನಾವಣೆಗೆ ಬಳಕೆಯಾದ ಇವಿಎಂ ನೀಡಲು ಆಯೋಗ ಸಿದ್ಧವಿದೆ ಎಂದು ತಿಳಿಸಿದರು.
Advertisement
ಈ ಸಭೆಯಲ್ಲಿ ಭಾರತದಲ್ಲಿ ಬಳಕೆಯಾಗುತ್ತಿರುವ ಇವಿಎಂ ಎಷ್ಟು ಸುರಕ್ಷಿತವಾಗಿದೆ ಎನ್ನುವುದನ್ನು ವಿವರಿಸಲಾಯಿತು. ಆದರೆ ಇವಿಎಂ ಹ್ಯಾಕಥಾನ್ ನಡೆಯುವ ದಿನ ಪ್ರಕಟವಾಗಿಲ್ಲ. ಸಭೆಯಲ್ಲಿ ಚುನಾವಣಾ ಆಯೋಗ ಯಾವ ಪಕ್ಷದ ಪರವಾಗಿ ಕೆಲಸ ಮಾಡುತ್ತಿಲ್ಲ. ಎಲ್ಲ ಪಕ್ಷಗಳನ್ನು ಸಮಾನವಾಗಿ ನೋಡುತ್ತೇವೆ ಎಂದು ಆಯುಕ್ತ ನಸೀಂ ಜೈದಿ ತಿಳಿಸಿದರು.
Advertisement
ಈ ಸಭೆಯಲ್ಲಿ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಿಪಿಐ, ಆರ್‍ಜೆಡಿ ಮತ್ತು ಆರ್‍ಎಲ್‍ಡಿ ಹಲವಾರು ಗಂಭೀರ ವಿಚಾರಗಳನ್ನು ಪ್ರಸ್ತಾಪ ಮಾಡಿದೆ. ಸಭೆಯ ಬಳಿಕ ಮಾತನಾಡಿದ ಸಿಪಿಐ ಕಾರ್ಯದರ್ಶಿ ಅತುಲ್ ಅಂಜನ್, ಅಭಿವೃದ್ಧಿ ಹೊಂದಿದ ದೇಶಗಳು ಯಾಕೆ ಇವಿಎಂ ಬಳಕೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
Advertisement
ಇಂದು ಆಯೋಜನೆಗೊಂಡ ಸಭೆಯಲ್ಲಿ 7 ರಾಷ್ಟ್ರೀಯ ಪಕ್ಷ ಮತ್ತು 48 ಪ್ರಾದೇಶಿಕ ಪಕ್ಷಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
Advertisement
ಇದನ್ನೂ ಓದಿ:ಲೈವ್ ಡೆಮೋ ಮಾಡಿ ಆಪ್‍ನಿಂದ ಇವಿಎಂ ಹ್ಯಾಕ್: ಯಾರಿಗೆ ಎಷ್ಟು ವೋಟ್ ಬಿತ್ತು?