ಬೆಳಗಾವಿ: ಎಲ್ಲಾ ಶತ್ರಗಳು ಒಟ್ಟಾಗಿ ದಾಳಿ ಮಾಡುವುದನ್ನೇ ರಾಜಕಾರಣ ಎನ್ನುವುದು. ಪ್ರಧಾನಿಯಾಗಲಿ, ಗ್ರಾಮ ಪಂಚಾಯತ್ ಅಧ್ಯಕ್ಷರಾಗಲಿ ಅವರನ್ನು ಸೋಲಿಸಲು ಷಡ್ಯಂತ್ರ ನಡೆಯುತ್ತಲೇ ಇರುತ್ತದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಮಿತ್ರರೂ ಅಲ್ಲ. ಇದು ದಿನವೂ ಬದಲಾಗುತ್ತಿರುತ್ತದೆ, ನಾವು ಜಾಗೃತರಾಗಿ ಮುನ್ನಡೆಯಬೇಕು. ಸಮಯಕ್ಕೆ ತಕ್ಕಂತೆ ನಾವು ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
2018ರ ವಿಧಾನಸಭೆ ಚುನಾವಣೆಯಲ್ಲಿ 120 ಕ್ಷೇತ್ರಗಳಿಂದ ಜಯ ಸಾಧಿಸುತ್ತೇವೆ ಎನ್ನುವ ಆಸೆ ಇತ್ತು. ಆದರೆ ರಾಜ್ಯದ ಜನತೆ ನಮಗೆ ಬಹುಮತ ನೀಡಲಿಲ್ಲ. ಹೀಗಾಗಿ ಸಮ್ಮಿಶ್ರ ಸರ್ಕಾರ ರಚನೆ ಅನಿವಾರ್ಯವಾಯಿತು. ಒಂದು ವೇಳೆ ಕಾಂಗ್ರೆಸ್ ಬಹುಮತ ಪಡೆದಿದ್ದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುತ್ತಿದ್ದರು ಎಂದರು.
ಅವಸರದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದರೂ 5 ವರ್ಷ ಆಡಳಿತ ಮಾಡಲಿದೆ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಹಾಗೂ ಡಾ.ಜಿ.ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv