– ಸೋಮವಾರ ಮಧ್ಯಾಹ್ನ 1 ಗಂಟೆಯೊಳಗೆ ಉತ್ತರಿಸುವಂತೆ ಸೂಚನೆ
ನವದೆಹಲಿ: ಮಹಾರಾಷ್ಟ್ರ ಚುನಾವಣಾ ಪ್ರಚಾರದ ರ‍್ಯಾಲಿಗಳಲ್ಲಿ ಸ್ಟಾರ್ ಪ್ರಚಾರಕರಾದ ಅಮಿತ್ ಶಾ ಮತ್ತು ರಾಹುಲ್ ಗಾಂಧಿ ಮಾಡಿದ ಕಾಮೆಂಟ್‌ಗಳಿಗೆ ವಿವರಣೆ ನೀಡುವಂತೆ ಚುನಾವಣಾ ಆಯೋಗ (Election Commission) ಕೇಳಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ (JP Nadda) ಹಾಗೂ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಈ ಸಂಬಂಧ ಸ್ಪಷ್ಟನೆ ನೀಡುವಂತೆ ಚುನಾವಣಾ ಆಯೋಗ ಕೇಳಿದ್ದು, ಸೋಮವಾರ ಮಧ್ಯಾಹ್ನ 1 ಗಂಟೆ ಒಳಗೆ ಉತ್ತರಿಸುವಂತೆ ಸೂಚನೆ ನೀಡಿದೆ.
ಚುನಾವಣಾ ಪ್ರಚಾರದ ವೇಳೆ ಅಮಿತ್ ಶಾ ಮತ್ತು ರಾಹುಲ್ ಗಾಂಧಿ (Rahul Gandhi) ಅವರ ಹೇಳಿಕೆಗಳು ನೀತಿ ಸಂಹಿತಿಯನ್ನು ಉಲ್ಲಂಘಿಸಿದ ಆರೋಪ ಕೇಳಿಬಂದಿದೆ. ಇದೇ ನವೆಂಬರ್ 20ರಂದು ಮಹಾರಾಷ್ಟ್ರ ಮತ್ತು ಜಾರ್ಖಂಡ್ (Jharkhand )(ಜಾರ್ಖಂಡ್‌ನಲ್ಲಿ 2ನೇ ಸುತ್ತಿನ ಮತದಾನ) ಚುನಾವಣೆಗೆ 2 ದಿನ ಮೊದಲು ಸ್ಪಷ್ಟನೆ ನೀಡುವಂತೆ ಸೂಚಿಸಿದೆ. ಇದನ್ನೂ ಓದಿ: ‘ಅಮರನ್’ ಚಿತ್ರದಲ್ಲಿ ಮುಸ್ಲಿಮರ ಅವಹೇಳನ – ತಮಿಳುನಾಡಿನ ಚಿತ್ರಮಂದಿರಕ್ಕೆ ಪೆಟ್ರೋಲ್ ಬಾಂಬ್ ದಾಳಿ
ಇದೇ ನವೆಂಬರ್ 6ರಂದು ಮುಂಬೈನಲ್ಲಿ ನಡೆದ ರ‍್ಯಾಲಿ ವೇಳೆ ರಾಹುಲ್ ಗಾಂಧಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ನೇತೃತ್ವದ ಬಿಜೆಪಿ ನಿಯೋಗವು ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ರಾಹುಲ್, ರಾಜ್ಯಗಳ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಸಲು ಸುಳ್ಳು ಹೇಳುತ್ತಿದ್ದಾರೆ, ಇದಕ್ಕೆ ಕಡಿವಾಣ ಹಾಕುವಂತೆ ದೂರಿನಲ್ಲಿ ತಿಳಿಸಿತ್ತು. ಇದನ್ನೂ ಓದಿ: ಅಮೆರಿಕದಲ್ಲಿ ಟೇಕಾಫ್‌ಗೆ ಸಿದ್ಧವಾಗಿದ್ದ ವಿಮಾನದ ಮೇಲೆ ಗುಂಡಿನ ದಾಳಿ – ಕಿಡಿಗೇಡಿಗಳಿಗೆ ಶೋಧ
ಇತ್ತ ಕಾಂಗ್ರೆಸ್ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ಪ್ರತ್ಯೇಕ ದೂರುಗಳನ್ನು ಸಲ್ಲಿಸಿತ್ತು. ಮೋದಿ ಮತ್ತು ಶಾ, ಮಹಾರಾಷ್ಟ್ರ, ಜಾರ್ಖಂಡ್ ಚುನಾವಣಾ ಪ್ರಚಾರ ರ‍್ಯಾಲಿಗಳಲ್ಲಿ ಸುಳ್ಳು ಹಬ್ಬಿಸುತ್ತಿದ್ದಾರೆ, ದೇಶ ವಿಭಜನೆಯಂತಹ ಪ್ರಚೋದನಕಾರಿ ಭಾಷಣಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ಉಭಯ ಪಕ್ಷಗಳ ರಾಷ್ಟ್ರೀಯ ಅಧ್ಯಕ್ಷರು ಸ್ಪಷ್ಟನೆ ನೀಡುವಂತೆ ಆಯೋಗ ಕೋರಿದೆ.
ಇದೇ ನವೆಂಬರ್ 20ರಂದು ಜಾರ್ಖಂಡ್‌ನಲ್ಲಿ 2ನೇ ಹಂತ ಹಾಗೂ ಮಹಾರಾಷ್ಟ್ರದ 288 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: 75 ಕೋಟಿ ಮೌಲ್ಯದ ಚಾಪರ್‌ನಲ್ಲಿ ಸೆಕ್ಸ್ ಮಾಡುತ್ತಲೇ ಸಿಕ್ಕಿಬಿದ್ದ ಬ್ರಿಟನ್ ಸೈನಿಕರು