ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ (Union Budget 2023) ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಮೀಸಲಿಡುವ ಮೂಲಕ ಮಧ್ಯ ಕರ್ನಾಟಕದ 7, ಮಲೆನಾಡಿನ 2, ಹಳೇ ಮೈಸೂರು ಭಾಗದ ಮೂರು ತಾಲೂಕುಗಳ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ.
ಕರ್ನಾಟಕ ಚುನಾವಣೆಯಲ್ಲಿ ಹಿಂದುತ್ವ + ಅಭಿವೃದ್ಧಿ ಅಸ್ತ್ರ ಪ್ರಯೋಗಿಸುತ್ತಿರುವ ಬಿಜೆಪಿ ಈಗ ಭದ್ರಾ ಮೇಲ್ದಂಡೆ ಯೋಜನೆ (Upper Bhadra Project) ವಿಚಾರವನ್ನು ಮುಂದಿಟ್ಟುಕೊಂಡು ಈ ಭಾಗದಲ್ಲಿ ಪ್ರಚಾರ ನಡೆಸುವ ಸಾಧ್ಯತೆಯಿದೆ.
Advertisement
787 ಹಳ್ಳಿಗಳಿಗೆ ಅನುಕೂಲ ಆಗುವ ಯೋಜನೆಯನ್ನು ಮುಂದಿಟ್ಟುಕೊಂಡು ಬಿಜೆಪಿ (BJP) ಮತಬೇಟೆಗೆ ಸಿದ್ಧವಾಗಿದೆ ಎಂಬ ಮಾತುಗಳು ಈಗ ಕೇಳಿ ಬಂದಿದೆ. ಈಗಾಗಲೇ ಮಧ್ಯಕರ್ನಾಟಕ ಭಾಗದಲ್ಲಿ ಜೆ.ಪಿ.ನಡ್ಡಾ ಮಠಯಾತ್ರೆ ನಡೆಸಿದರೆ, ಹಳೇ ಮೈಸೂರು ಭಾಗದಲ್ಲಿ ಅಮಿತ್ ಶಾ ಪ್ರವಾಸ ಮಾಡಿದ್ದಾರೆ. ಈಗ ನಾಲ್ಕು ಜಿಲ್ಲೆಗಳಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನೇ ಅಸ್ತ್ರವನ್ನಾಗಿ ಮಾಡಿಕೊಳ್ಳಲು ಬಿಜೆಪಿ ಮೆಗಾ ಪ್ಲ್ಯಾನ್ ಮಾಡಿದೆ. ಇದನ್ನೂ ಓದಿ: ಧಾರವಾಡದ ಕಸೂತಿ ಕಲೆಯಿರುವ ಸೀರೆಯುಟ್ಟು ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮ
Advertisement
Advertisement
ಏನಿದು ಭದ್ರಾ ಮೇಲ್ದಂಡೆ ಯೋಜನೆ?
ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ ವ್ಯಾಪ್ತಿಯ 5,57,022 ಎಕರೆ ಪ್ರದೇಶದ ವ್ಯಾಪ್ತಿಯಲ್ಲಿರಯವ 367 ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆ ಇದಾಗಿದೆ.
Advertisement
29.9 ಟಿಎಂಸಿ ನೀರು ಬಳಕೆಗೆ ಯೋಜನೆಗೆ ಅನುಮತಿ ಸಿಕ್ಕಿದ್ದು ಚಿಕ್ಕಮಗಳೂರಿನ ತರೀಕೆರೆ, ಕಡೂರು, ಚಿತ್ರದುರ್ಗದ ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಚಿತ್ರದುರ್ಗ ಚಳ್ಳಕೆರೆ, ಮೊಳಕಾಲ್ಮೂರು, ದಾವಣಗೆರೆಯ ಶಿರಾ, ಜಗಳೂರು, ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಪಾವಗಡ ತಾಲೂಕು ಸೇರಿದಂತೆ ಒಟ್ಟು 787 ಗ್ರಾಮಗಳ 74.26 ಲಕ್ಷ ಜನರಿಗೆ ಅನುಕೂಲವಾಗಲು ಈ ಯೋಜನೆ ರೂಪಿಸಲಾಗಿದೆ.
2020-21 ರಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಪರಿಷ್ಕೃತ ಅಂದಾಜು ಮೊತ್ತ 21,473 ಕೋಟಿ ರೂ.ಗೆ ಏರಿಕೆಯಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k