– ನಿಯಮ ಪಾಲನೆ ಆಗ್ತಿದೆ ಎಂದ ಅಧಿಕಾರಿಗಳು
ಕಲಬುರಗಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಒಡೆತನದ ಸಿದ್ದಸಿರಿ ಎಥೆನಾಲ್ ಕಂಪನಿಗೆ ಬೆಳಗಾವಿ ವಿಭಾಗದ ಮಾಲಿನ್ಯ ನಿಯಂತ್ರಣ ಮಂಡಳಿ (Pollution Control Board) ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
ಚಿಂಚೋಳಿಯ ಹೊರವಲಯದಲ್ಲಿರುವ ಕಾರ್ಖಾನೆಗೆ ಅಧಿಕಾರಿಗಳು ಭೇಟಿ ನೀಡಿದ್ದರು. ಮಾಲಿನ್ಯ ನಿಯಂತ್ರಣ ಮಂಡಳಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಆದೇಶ ನೀಡಿತ್ತು. ಆದೇಶದ ಮೇರೆಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಗಳ ಪಾಲನೆ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸರ್, ನನ್ನ ಟೈಂ, ನನ್ನ ಗ್ರಹಚಾರ ಸರಿಯಿಲ್ಲ ಅಷ್ಟೇ- ದರ್ಶನ್
Advertisement
Advertisement
ಕಾರ್ಖಾನೆಯ ಒಳಭಾಗದಲ್ಲಿ ವಿಡಿಯೋ ಮಾಡಿಕೊಂಡು ಅಧಿಕಾರಿಗಳು ತೆರಳಿದ್ದಾರೆ. ಇಂದು (ಶುಕ್ರವಾರ) ಮಾಲಿನ್ಯ ನಿಯಂತ್ರಣ ಮಂಡಳಿ ಕೇಂದ್ರ ಕಚೇರಿಗೆ ವರದಿ ಸಲ್ಲಿಸಲಿದ್ದಾರೆ. ಮೇಲ್ನೋಟಕ್ಕೆ ನಿಯಮಗಳ ಪಾಲನೆ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಪರಿಶೀಲನೆ ಮುಗಿಯುತ್ತಿದ್ದಂತೆ ಕಾರ್ಖಾನೆ ಪ್ರಾರಂಭಕ್ಕೆ ಅನುಮತಿ ನೀಡುವಂತೆ ಅಧಿಕಾರಿಗಳಿಗೆ ರೈತರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಇಂದು ಪೀಣ್ಯ ಇಂಡಸ್ಟ್ರಿಯಲ್ ಏರಿಯಾದಿಂದ ನಾಗಸಂದ್ರದವರೆಗೂ ಮೆಟ್ರೋ ಸೇವೆ ಸ್ಥಗಿತ