ನವದೆಹಲಿ: ರಾಷ್ಟ್ರ ರಾಜಧಾನಿಯ ಗಾಳಿಯ ಗುಣಮಟ್ಟದಲ್ಲಿ (Delhi Air Quality) ಸುಧಾರಣೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಅಡಿಯಲ್ಲಿ ವಿಧಿಸಲಾಗಿದ್ದ 3ನೇ ಹಂತದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ. ಜೊತೆಗೆ BS-III ಪೆಟ್ರೋಲ್ ಮತ್ತು BS-IV ಡೀಸೆಲ್ ವಾಹನಗಳ ಓಡಾಟದ ಮೇಲಿನ ನಿರ್ಬಂಧಗಳನ್ನೂ ಸಡಿಲಗೊಳಿಸಲಾಗಿದೆ.
Advertisement
ಭಾನುವಾರ (ಇಂದು) ದೆಹಲಿ ವಾಯು ಗುಣಮಟ್ಟ ಸೂಚ್ಯಂಕದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ವರದಿಗಳು ತಿಳಿಸಿವೆ. ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಯ (CPCB) ಅಂಕಿ – ಅಂಶಗಳ ಪ್ರಕಾರ, ಮಧ್ಯಾಹ್ನ 2 ಗಂಟೆ ವೇಳೆ ದೆಹಲಿಯ ಎಕ್ಯೂಐ 348 ಆಗಿತ್ತು, ಇದು ಮಧ್ಯಾಹ್ನ 3 ಗಂಟೆ ವೇಳೆಗೆ 343 ಹಾಗೂ ಸಂಜೆ 5 ಗಂಟೆ ಸುಮಾರಿಗೆ 335 ದಾಖಲಾಗಿದೆ. ಇದು ಸುಧಾರಣೆಯ ಸ್ಪಷ್ಟ ಸಂಕೇತ ಎಂದು ವರದಿ ಹೇಳಿದೆ.
Advertisement
Advertisement
ಈ ಸಕಾರಾತ್ಮಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿಯ ಎನ್‌ಸಿಆರ್ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ವಿಧಿಸಲಾಗಿದ್ದ 3ನೇ ಹಂತದ ನಿರ್ಬಂಧಗಳನ್ನು ಸರ್ಕಾರ ತೆರವುಗೊಳಿಸಿದೆ. ಇದನ್ನೂ ಓದಿ: ಪುರಿಯ ಜಗನ್ನಾಥ ದೇವಸ್ಥಾನದ ಮೇಲೆ ಡ್ರೋನ್ ಹಾರಾಟ – ದೇವಾಲಯದ ಸುತ್ತ ಪೊಲೀಸ್ ಬಿಗಿಭದ್ರತೆ
Advertisement
ಹಂತ-1, ಹಂತ – 2ರ ನಿರ್ಬಂಧಗಳು ಮುಂದುವರಿಯಲಿವೆ. ಇದರೊಂದಿಗೆ ಕೈಗಾರಿಕಾ ಘಟಕಗಳು ಹಾಗೂ ಕಟ್ಟಡ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ವಿಧಿಸಲಾದ ನಿರ್ಬಂಧಗಳು ಮುಂದಿನ ಆದೇಶದವರೆಗೆ ಮುಂದುವರಿಯಲಿವೆ ಎಂದು ಸರ್ಕಾರ ಹೇಳಿದೆ ಎನ್ನಲಾಗಿದೆ. ಇದನ್ನೂ ಓದಿ: ಚುನಾವಣೆಯಲ್ಲಿ ಗೆದ್ದರೆ ಪ್ರಿಯಾಂಕ ಕೆನ್ನೆಯಂತೆ ನಯವಾದ ರಸ್ತೆಗಳನ್ನು ನಿರ್ಮಿಸುತ್ತೇನೆ: ಬಿಜೆಪಿ ಅಭ್ಯರ್ಥಿ ವಿವಾದಾತ್ಮಕ ಹೇಳಿಕೆ