ಚೀನಾದಿಂದ ಪಾಲಿಸ್ಟರ್‌ ಧ್ವಜ ಆಮದು ಮಾಡಿಕೊಂಡು ರಾಷ್ಟ್ರಧ್ವಜ, ಖಾದಿಗೆ ಅವಮಾನ: ಕೇಂದ್ರದ ವಿರುದ್ಧ ಸಿದ್ದು ಕಿಡಿ

Public TV
2 Min Read
SIDDARAMAIAH BJP

ಬೆಂಗಳೂರು: ಸ್ವಾತಂತ್ರ್ಯ ಅಮೃತಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರ ʼಹರ್‌ ಘರ್‌ ತಿರಂಗಾʼ ಅಭಿಯಾನಕ್ಕೆ ಕರೆ ನೀಡಿದೆ. ಸ್ವಾತಂತ್ರ್ಯ ದಿನದಂದು ಖಾದಿ ಬಟ್ಟೆಯ ಬದಲು ಪಾಲಿಸ್ಟರ್‌ ಧ್ವಜಗಳಿಗೆ ಅನುಮತಿ ನೀಡಿರುವುದಕ್ಕೆ ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ರಾಷ್ಟ್ರಗೀತೆಯಷ್ಟೇ ಪವಿತ್ರವಾದ ರಾಷ್ಟ್ರಧ್ವಜ ದೇಶದ ಅಸ್ಮಿತೆ ಮತ್ತು ಸ್ವಾಭಿಮಾನದ ಸಂಕೇತ. ಕೇಂದ್ರ ಸರ್ಕಾರ ಧ್ವಜ ಸಂಹಿತೆಗೆ ತಿದ್ದುಪಡಿ ಮಾಡಿ ಪಾಲಿಸ್ಟರ್ ರಾಷ್ಟ್ರಧ್ವಜಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುತ್ತಿರುವುದು ರಾಷ್ಟ್ರಧ್ವಜ ಮತ್ತು ಖಾದಿ ಬಟ್ಟೆಗೆ ಮಾಡಿರುವ ಅಗೌರವವಾಗಿದೆ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಹೈಕಮಾಂಡ್‍ಗೆ ಸೆಡ್ಡು ಹೊಡೆದ ಬಿಎಸ್‍ವೈ – ಪುತ್ರನಿಗೆ ಕ್ಷೇತ್ರ ಬಿಟ್ಟುಕೊಟ್ಟಿರುವ ಹಿಂದಿದೆ ಹಲವು ಲೆಕ್ಕಾಚಾರ

ಟ್ವೀಟ್‌ನಲ್ಲಿ ಏನಿದೆ?
ಕೇಸರಿ, ಬಿಳಿ, ಹಸಿರು ಬಣ್ಣಗಳ ತ್ರಿವರ್ಣ ಧ್ವಜವನ್ನು 1947ರಲ್ಲಿ ಇದೇ ದಿನ ಸಂವಿಧಾನ ರಚನಾ ಸಭೆ ರಾಷ್ಟ್ರಧ್ವಜವಾಗಿ ಅಂಗೀಕರಿಸಿತ್ತು. ಈ ಬಣ್ಣಗಳು ಸಾರುವ ಶಾಂತಿ, ತ್ಯಾಗ, ಧೈರ್ಯ, ಸಾಮರ್ಥ್ಯ, ಭರವಸೆ ಮತ್ತು ಸರ್ವಸಮಾನ ಅಭಿವೃದ್ದಿಯ ಸಂದೇಶವನ್ನು ನಾವೆಲ್ಲರೂ ಗೌರವಿಸೋಣ.

ಪಾಲಿಸ್ಟರ್ ರಾಷ್ಟ್ರಧ್ವಜಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಿರ್ಧಾರದಿಂದಾಗಿ, ದಶಕಗಳಿಂದ ರಾಷ್ಟ್ರಧ್ವಜವನ್ನು ತಯಾರಿಸಿ ದೇಶಕ್ಕೆ ಹಂಚುತ್ತಿದ್ದ ನಮ್ಮ ಹುಬ್ಬಳ್ಳಿಯ ‘ಕರ್ನಾಟಕ ಖಾದಿ ಗ್ರಾಮದ್ಯೋಗ ಸಂಯುಕ್ತ ಸಂಘ’ ಬಾಗಿಲು ಹಾಕುವ ಪರಿಸ್ಥಿತಿ ಎದುರಾಗಿದೆ. ಇದನ್ನೂ ಓದಿ: ವಿ ಆರ್ ನಾಟ್ ಎ ಸೆಕೆಂಡ್ ಕ್ಲಾಸ್ ಸಿಟಿಜನ್ಸ್: ಎಂ.ಬಿ.ಪಾಟೀಲ್

ಸರ್ಕಾರ ಪಾಲಿಸ್ಟರ್ ಧ್ವಜಗಳ ಬಳಕೆಯ ಆದೇಶವನ್ನು ತಕ್ಷಣ ವಾಪಸು ಪಡೆದು ಖಾದಿ ಬಟ್ಟೆಯ ರಾಷ್ಟ್ರಧ್ವಜಗಳ ತಯಾರಿಕೆಗಷ್ಟೇ ಅವಕಾಶ ನೀಡಬೇಕು. ಈ ಮೂಲಕ ರಾಷ್ಟ್ರಧ್ವಜದ ಗೌರವವನ್ನು ಎತ್ತಿಹಿಡಿಯಬೇಕು ಮತ್ತು ಖಾದಿ ಗ್ರಾಮದ್ಯೋಗದ ಅಭಿವೃದ್ದಿಗೆ ನೆರವಾಗಬೇಕು ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರವು ಧ್ವಜ ಸಂಹಿತೆ-2002ಕ್ಕೆ ತಿದ್ದುಪಡಿ ತಂದು ಖಾದಿ ಬಟ್ಟೆಯ ಬದಲು ಪಾಲಿಸ್ಟರ್‌ ಧ್ವಜಗಳಿಗೆ ಅನುಮತಿ ನೀಡಿದೆ. ಇದು ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿದ್ದು, ಕಾಂಗ್ರಸ್‌ ಕೂಡ ಕೇಂದ್ರದ ವಿರುದ್ಧ ಹರಿಹಾಯ್ದಿತ್ತು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *