– 2 ದಿನಗಳ ಅಂತರದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ
ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಎರಡೇ ದಿನಗಳ ಅಂತರದಲ್ಲಿ ಪೊನ್ನಂಪೇಟೆಯ ಇಂಜಿನಿಯರಿಂಗ್ ಕಾಲೇಜು (Engineering College) ಹಾಸ್ಟೆಲ್ನ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇತ್ತೀಚೆಗೆ ರಾಯಚೂರು (Raichur) ಮೂಲದ ತೇಜಸ್ವಿನಿ ಎಂಬ 19 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬೆನ್ನಲ್ಲೇ ಪಿರಿಯಾಪಟ್ಟಣ ಮೂಲದ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹಳ್ಳಿಗಟ್ಟುವಿನ CET ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಇಎಐ ಅಂಡ್ ಡಿಎಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿರಿಯಾಪಟ್ಟಣ ಮೂಲದ ಯಶ್ವಂತ್ (20) ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಶುಕ್ರವಾರ ರಾತ್ರಿ 8:30ರ ಸುಮಾರಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: Kodagu | ಕಾಲೇಜು ಹಾಸ್ಟೆಲ್ನಲ್ಲಿ ರಾಯಚೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪಿರಿಯಾಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: Madikeri | ಓಂಕಾರೇಶ್ವರ ದೇವಾಲಯದ ಕಲ್ಯಾಣಿ ಭರ್ತಿಗೆ ಒಂದೇ ಮೆಟ್ಟಿಲು ಬಾಕಿ