– ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು
ಕೊಪ್ಪಳ: ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಗಂಡು ಮಕ್ಕಳಿಗೆ ಮನೆಯಲ್ಲಿ ಹೇಳಬೇಕು ಎಂದು ನಟಿ ಪೂಜಾಗಾಂಧಿ ಗ್ಯಾಂಗ್ ರೇಪ್ ವಿರುದ್ಧ ಕಿಡಿಕಾರಿದ್ದಾರೆ.
ಮೈಸೂರು ಯುವತಿ ಗ್ಯಾಂಗ್ ರೇಪ್ ಪ್ರಕರಣ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣ ಕೇಳಿ ತುಂಬಾ ಬೇಸರವಾಗಿದೆ. ಇಂತಹ ಪ್ರಕರಣಗಳು ಬೇರೆ ಬೇರೆ ರಾಜ್ಯದಲ್ಲಿ ನಡೆಯುತ್ತಿದ್ದನ್ನು ಕೇಳಿದ್ದೇವೆ. ಆದರೆ ಅಂತಹ ಘಟನೆ ಈಗ ಮೈಸೂರಿನಲ್ಲಿ ನಡೆದಿದೆ. ಇದು ನಿಜಕ್ಕೂ ಬೇಸರದ ಸಂಗತಿ. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ನೀಚ ಕೃತ್ಯ ಮಾಡುವವರಿಗೆ ಪೊಲೀಸರು ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ: ಅರಗ ಜ್ಞಾನೇಂದ್ರ
ಈ ರೀತಿಯ ಘಟನೆಗಳಿಂದ ಮಹಿಳೆಯರಿಗೆ ರಕ್ಷಣೆ ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ. ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಗಂಡು ಮಕ್ಕಳಿಗೆ ಮನೆಯಲ್ಲಿ ಹೇಳಬೇಕು. ಎಲ್ಲರ ಮನೆಯ ಹೆಣ್ಣು ಮಕ್ಕಳು ಒಂದೆ. ಕಾನೂನು ಪ್ರಕಾರ ಏನು ಕ್ರಮ ಇದೆಯೋ ಆ ಕ್ರಮ ಜರುಗಿಸಬೇಕು. ಬೇರೆಯವರು ಅತ್ಯಾಚಾರ ಮಾಡುವುದಕ್ಕೆ ಮುಂಚೆ ನೂರು ಬಾರಿ ಯೋಚಿಸಬೇಕು ಆ ರೀತಿಯ ಶಿಕ್ಷೆ ನೀಡಬೇಕು ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ಗ್ಯಾಂಗ್‍ರೇಪ್ ಪ್ರಕರಣ- ಆರೋಪಿಗಳನ್ನು ಬಂಧಿಸಿದ ಪೊಲೀಸರ ತಂಡಕ್ಕೆ 5 ಲಕ್ಷ ರೂ. ಬಹುಮಾನ
ಸಣ್ಣ ಸಣ್ಣ ಮಕ್ಕಳ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ. ಇಂತಹ ಮನಸ್ಥಿತಿಯವರಿಗೆ ಕಠಿಣ ಶಿಕ್ಷೆ ನೀಡಬೇಕು. ನಾನು ಕಾನೂನನ್ನು ಗೌರವಿಸುತ್ತೇನೆ. ಮಹಿಳೆಯರ ರಕ್ಷಣೆಗಾಗಿ ಇರುವ ಕಾನೂನುಗಳಿಂದ ಎಲ್ಲ ಮಹಿಳೆಯರು ನಾವು ಸುರಕ್ಷಿತವಾಗಿದ್ದೇವೆ ಎಂಬ ಭಾವನೆ ಬರಬೇಕು ಎಂದು ತಿಳಿಸಿದ್ದಾರೆ.
ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತಳವಾಡಿಯಲ್ಲಿ ಆರೋಪಿಗಳನ್ನು ಬಂಧಿಸಿರುವ ಪೊಲಿಸರು ಇದೀಗ ಅವರನ್ನು ಮೈಸೂರಿಗೆ ಕರೆತಂದು ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.ಇದನ್ನೂ ಓದಿ:ಅತ್ಯಾಚಾರ ಆರೋಪಿಗಳನ್ನು ಎನ್‍ಕೌಂಟರ್ ಮಾಡಬೇಕು: ಸಾ.ರಾ ಮಹೇಶ್