ಮಳೆ ಹುಡುಗಿ ಎಂದೇ ಖ್ಯಾತಿಯ ಆಗಿರುವ ಪೂಜಾ ಗಾಂಧಿ (Pooja Gandhi) ನಾಳೆ ಮದುವೆ (Marriage) ಆಗುತ್ತಿದ್ದಾರೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅವರು ಅಧಿಕೃತವಾಗಿ ಎಲ್ಲಿಯೂ ಹೇಳಿಲ್ಲವಾದರೂ, ಅವರ ಆಪ್ತರು ಹೇಳುವಂತೆ ನಾಳೆ ಉದ್ಯಮಿ ಜೊತೆ ಅವರು ಮಂತ್ರ ಮಾಂಗಲ್ಯ (Mantra Mangalya) ಮಾದರಿಯಲ್ಲಿ ಮದುವೆ ಆಗುತ್ತಿದ್ದಾರೆ.
Advertisement
ಬೆಂಗಳೂರಿನ ಯಲಹಂಕದಲ್ಲಿ ಈ ಮದುವೆ ನಡೆಯುತ್ತಿದ್ದು, ಉದ್ಯಮಿ ಹಾಗೂ ಅವರಿಗೆ ಕನ್ನಡ ಕಲಿಸಿರುವ ವಿಜಯ್ ಘೋರ್ಪಡೆ (Vijay Ghorpade) ಎನ್ನುವವರ ಜೊತೆ ಪೂಜಾ ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. ವಿಜಯ್ ಬೆಂಗಳೂರಿನ ಲಾಜೆಸ್ಟಿಕ್ ಕಂಪನಿಯ ಮಾಲೀಕರು ಎಂದು ಹೇಳಲಾಗುತ್ತಿದೆ.
Advertisement
Advertisement
ಈಗಾಗಲೇ ಪೂಜಾ ತಮ್ಮ ಆಪ್ತರಿಗೆ ಕರೆ ಮಾಡಿ, ಮದುವೆ ಆಹ್ವಾನ ನೀಡಿದ್ದಾರೆ. ಮದುವೆ ಅತ್ಯಂತ ಸರಳವಾಗಿ ನಡೆಯುವುದರಿಂದ ಕೇವಲ ಹಸ್ತಾಕ್ಷರದಲ್ಲಿ ಆಮಂತ್ರಣ ಪತ್ರಿಕೆಯನ್ನು ರೆಡಿ ಮಾಡಿ, ಆಪ್ತರಿಗೆ ಕಳುಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಮುಂಗಾರು ಮಳೆ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದಾಗಿ ಈ ಹುಡುಗಿ ಇದೀಗ ಕನ್ನಡದವರೇ ಆಗಿದ್ದಾರೆ.