ಕುಡ್ಲದ ಸುಂದರಿ ಪೂಜಾ ಹೆಗ್ಡೆ (Pooja Hegde) ಇತ್ತೀಚೆಗೆ ಕನ್ನಡದ ಸಿನಿಮಾದಲ್ಲಿ ನಟಿಸುವ ಆಸಕ್ತಿಯನ್ನು ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದರು. ಉತ್ತಮ ಕಥೆ ಸಿಕ್ಕರೆ ಕನ್ನಡದಲ್ಲಿ ನಟಿಸೋದಾಗಿ ಹೇಳಿದ್ದರು. ಅದರಂತೆ ಈಗ ಸ್ಟಾರ್ ನಟ ಸುದೀಪ್ (Sudeep) ಸಿನಿಮಾಗೆ ನಾಯಕಿಯಾಗಿ ಪೂಜಾ ಹೆಗ್ಡೆ ನಟಿಸಲಿದ್ದಾರೆ ಎನ್ನಲಾದ ಸುದ್ದಿಯೊಂದು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:ಕನ್ನಡದಲ್ಲಿ ನಟಿಸಲು ಹಲವು ಕಥೆಗಳನ್ನು ಕೇಳಿದ್ದೆ, ಯಾವುದು ಇಷ್ಟವಾಗಿಲ್ಲ: ಪೂಜಾ ಹೆಗ್ಡೆ
ಕನ್ನಡದಲ್ಲಿ ನಟಿಸುವಂತೆ ಪೋಷಕರಿಂದ ಒತ್ತಡವಿದೆ. ನಾನು ಕೂಡ ಹಲವು ಕಥೆಗಳನ್ನು ಕೇಳಿದ್ದೇನೆ. ಆದರೆ ಯಾವುದು ಇಷ್ಟವಾಗಿಲ್ಲ. ಉತ್ತಮ ಕಥೆ ಸಿಕ್ಕಿದ್ದಲ್ಲಿ ಖಂಡಿತಾ ಕನ್ನಡದಲ್ಲಿ ನಟಿಸೋದಾಗಿ ಇಂಗಿತ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಅವರಿಗೆ ಸುದೀಪ್ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದೆ ಎನ್ನಲಾಗಿದೆ. ಇದನ್ನೂ ಓದಿ:ಪ್ರೇಮ್, ಗೋಲ್ಡನ್ ಸ್ಟಾರ್ ಗಣೇಶ್ ಪುತ್ರನಿಗೆ ರಂಜನಿ ರಾಘವನ್ ಆ್ಯಕ್ಷನ್ ಕಟ್
ಸುದೀಪ್ ನಟನೆಯ ಮತ್ತು ಅನೂಪ್ ಭಂಡಾರಿ ನಿರ್ದೇಶನದ ‘ಬಿಲ್ಲಾ ರಂಗ ಭಾಷಾ’ (Billa Ranga Basha) ಚಿತ್ರದ ಶೂಟಿಂಗ್ ನಡೆಯುತ್ತಿದೆ. ಈ ಸಿನಿಮಾಗೆ ಪೂಜಾ ಹೆಗ್ಡೆ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾದ ಸುದ್ದಿ ಇದೀಗ ಹರಿದಾಡುತ್ತಿದೆ. ಕನ್ನಡದಲ್ಲಿ ಒಳ್ಳೆಯ ಅವಕಾಶಕ್ಕಾಗಿ ಕಾಯ್ತಿದ್ದ ಪೂಜಾಗೆ ಇದೀಗ ಸುದೀಪ್ ಚಿತ್ರ ಒಪ್ಕೊಂಡಿದ್ದಾರೆ ಎನ್ನಲಾಗಿದೆ. ಇದು ನಿಜನಾ? ಎಂಬುದನ್ನು ಚಿತ್ರತಂಡ ಮತ್ತು ಪೂಜಾ ಕಡೆಯಿಂದಲೇ ಸ್ಪಷ್ಟನೆ ಸಿಗಬೇಕಿದೆ.
ಒಂದು ವೇಳೆ ಸುದೀಪ್‌ಗೆ ಪೂಜಾ ಹೆಗ್ಡೆ ನಾಯಕಿಯಾಗಿದ್ದಲ್ಲಿ ಫ್ಯಾನ್ಸ್‌ಗೆ ಮನರಂಜನೆ ಗ್ಯಾರಂಟಿ. ಸುದೀಪ್ ಚಿತ್ರದ ಮೂಲಕ ಅವರು ಕನ್ನಡಕ್ಕೆ ಎಂಟ್ರಿ ಕೊಟ್ಟಂತೆ ಆಗಲಿದೆ. ಸದ್ಯ ಈ ವಿಚಾರ ಕೇಳಿಯೇ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಚಿತ್ರತಂಡದ ಕಡೆಯಿಂದ ಗುಡ್ ನ್ಯೂಸ್ ಎಂದು ಫ್ಯಾನ್ಸ್ ಕಾಯ್ತಿದ್ದಾರೆ.