ಕನ್ನಡದ ಬ್ಯೂಟಿ ಶ್ರೀಲೀಲಾಗೆ (Sreeleela) ಪರಭಾಷೆಯಲ್ಲಿ ಬೇಡಿಕೆಯ ನಟಿಯಾಗಿದ್ದಾರೆ. ನಟಿಸಿದ ಸಿನಿಮಾಗಳು ಬ್ಲಾಕ್ ಬಸ್ಟರ್ ಹಿಟ್ ಆಗದೆ ಇದ್ರೂ ಅವಕಾಶಗಳಿಗೆ ಕೊರತೆಯೇನು ಇಲ್ಲ. ಆದರೆ ಇದೀಗ ನಟಿ ಬಂಪರ್ ಅವಕಾಶವೊಂದನ್ನು ಕಳೆದುಕೊಂಡಿದ್ದಾರೆ. ಶ್ರೀಲೀಲಾ ನಟಿಸಬೇಕಿದ್ದ ಪಾತ್ರಕ್ಕೆ ಕರಾವಳಿ ಬೆಡಗಿ ಪೂಜಾ ಹೆಗ್ಗೆ (Pooja Hegde) ಎಂಟ್ರಿ ಕೊಟ್ಟಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಬಾಲಿವುಡ್ ನಟ ವರುಣ್ ಧವನ್ (Varun Dhawan) ಚಿತ್ರದಲ್ಲಿ ಮೃಣಾಲ್ ಠಾಕೂರ್ ಮತ್ತು ಶ್ರೀಲೀಲಾ ಆಯ್ಕೆಯಾಗಿದ್ದರು. ಎರಡು ಪಾತ್ರಕ್ಕೂ ಸಾಕಷ್ಟು ಪ್ರಾಮುಖ್ಯತೆ ಇತ್ತು. ಆದರೆ ಶ್ರೀಲೀಲಾ ಆಯ್ಕೆಯಾಗಿದ್ದ ಪಾತ್ರಕ್ಕೆ ಈಗ ಪೂಜಾರನ್ನು ಫೈನಲ್ ಮಾಡಲಾಗಿದೆ. ಶ್ರೀಲೀಲಾರನ್ನು ಆ ಪಾತ್ರದಿಂದ ಹೊರಗಿಡಲಾಗಿದೆ ಎನ್ನಲಾದ ಸುದ್ದಿಯೊಂದು ಹರಿದಾಡುತ್ತಿದೆ. ಅಷ್ಟಕ್ಕೂ ಈ ಸುದ್ದಿ ಅದೆಷ್ಟರ ಮಟ್ಟಿಗೆ ನಿಜ ಎಂಬುದನ್ನು ಚಿತ್ರತಂಡ ಅನೌನ್ಸ್ ಮಾಡುವವರೆಗೂ ಕಾದುನೋಡಬೇಕಿದೆ.
ಇನ್ನೂ ಈ ಹಿಂದೆ ಮಹೇಶ್ ಬಾಬು (Mahesh Babu) ನಟನೆಯ ‘ಗುಂಟೂರು ಖಾರಂ’ ಚಿತ್ರಕ್ಕೆ ಮೊದಲು ಪೂಜಾ ಹೆಗ್ಡೆ ಆಯ್ಕೆಯಾಗಿದ್ದರು. ಆ ನಂತರ ಪೂಜಾ ಬದಲು ಶ್ರೀಲೀಲಾಗೆ ಚಿತ್ರತಂಡ ಮಣೆ ಹಾಕಿತ್ತು. ಆ ಚಿತ್ರ ರಿಲೀಸ್ ಆಗಿ ಶ್ರೀಲೀಲಾ ನಟನೆ ಮತ್ತು ಡ್ಯಾನ್ಸ್‌ಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಇದನ್ನೂ ಓದಿ:ಕಿಚ್ಚನ ಅನುಪಸ್ಥಿತಿಯಲ್ಲಿ ನಡೆಯಿತು ಎಲಿಮಿನೇಷನ್ ಪ್ರಕ್ರಿಯೆ- ಮಾನಸಾ ಔಟ್?
ಇನ್ನೂ ರಾಬಿನ್‌ಹುಡ್, ಉಸ್ತಾದ್ ಭಗತ್ ಸಿಂಗ್ ಸೇರಿದಂತೆ ಹಲವು ಚಿತ್ರಗಳು ಶ್ರೀಲೀಲಾ ಕೈಯಲ್ಲಿವೆ. ಈ ಎರಡು ಸಿನಿಮಾಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ.