ಮುಂಬೈ: ರೂಪದರ್ಶಿ, ನಟಿ ಪೂನಂ ಪಾಂಡೆ ವಿರುದ್ಧ ಮುಂಬೈ ನಗರದಲ್ಲಿ ಎಫ್‍ಐಆರ್ ದಾಖಲಾಗಿದೆ.
ಈ ಹಿಂದೆ ವಿವಾದಾತ್ಮಕ ವಿಚಾರಗಳಿಂದ ಸುದ್ದಿಯಾಗುತ್ತಿದ್ದ ಪೂನಂ ಪಾಂಡೆ ಭಾನುವಾರ ಸ್ನೇಹಿತನ ಜೊತೆಗೆ ಜಾಲಿ ರೈಡ್ ಹೋಗಿದ್ದಾರೆ.
ಮುಂಬೈ ಮಹಾನಗರದಲ್ಲಿ ಲಾಕ್‍ಡೌನ್ ವಿಧಿಸಲಾಗಿದ್ದರೂ, ತನ್ನ ಐಷಾರಾಮಿ ಕಾರಿನಲ್ಲಿ ಸುತ್ತಾಟ ನಡೆಸಿದ್ದಕ್ಕೆ ಎಫ್‍ಐಆರ್ ದಾಖಲಿಸಲಾಗಿದೆ. ಪೂನಂ ಪಾಂಡೆ ಯಾವುದೇ ಕಾರಣ ಇಲ್ಲದೇ ಮರೀನ್ ಡ್ರೈವ್ ನಲ್ಲಿ ಸುತ್ತಾಟ ನಡೆಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಬಂಧ ಹಿರಿಯ ಪೊಲೀಸ್ ಇನ್ಸ್ ಪೆಕ್ಟರ್ ಮೃತ್ಯುಂಜಯ್ ಹಿರೇಮಠ್ ಪ್ರತಿಕ್ರಿಯಿಸಿ, ಪೂನಂ ಪಾಂಡೆ ಮತ್ತು ಸ್ಯಾಮ್ ಅಹ್ಮದ್ ವಿರುದ್ಧ ಐಪಿಸಿ ಸೆಕ್ಷನ್ 269(ಜೀವಕ್ಕೆ ಅಪಾಯಕಾರಿಯಾದ ರೋಗವನ್ನು ನಿರ್ಲಕ್ಷ್ಯದಿಂದ ಹರಡುವುದು) 188( ಸರ್ಕಾರಿ ಆದೇಶ ಉಲ್ಲಂಘನೆ) ಮತ್ತು ರಾಷ್ಟ್ರೀಯ ವಿಪತ್ತು ಕಾಯ್ದೆಯ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
View this post on Instagram
Guys I heard I got arrested, While I was having a movie marathon last night.
ಈ ಸಂಬಂಧ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಪೂನಂ ಪಾಂಡೆ, ನಾನು ಅರೆಸ್ಟ್ ಆಗಿದ್ದೇನೆ ಎಂಬ ಸುದ್ದಿ ಹರಿದಾಡುತ್ತಿದೆ. ನನಗೆ ಏನು ಆಗಿಲ್ಲ. ನಾನು ಮನೆಯಲ್ಲೇ ಇದ್ದೇನೆ ಎಂದು ಇನ್ ಸ್ಟಾಗ್ರಾಮ್ ನಲ್ಲಿ ತಿಳಿಸಿದ್ದಾರೆ.