ಬಾಲಿವುಡ್ ಹಾಟ್ ತಾರೆ ಪೂನಂ ಪಾಂಡೆ ಅವರ ಹೊಸ ವಿಡಿಯೋ (Hot Video) ಸೋಷಿಯಲ್ ಮೀಡಿಯಾದಲ್ಲಿ ವೈರಲ್ (Viral) ಆಗಿದೆ. ಬಹುತೇಕ ಎದೆಭಾಗ ಕಾಣುವಂತೆ ಡ್ರೆಸ್ ಮಾಡಿಕೊಂಡು ಬೀದಿಗೆ ಬಂದಿದ್ದ ಪೂನಂ ಕಂಡು ಫ್ಯಾನ್ಸ್ ಬೆಚ್ಚಿದ್ದಾರೆ. ಬರ್ತಾ ಬರ್ತಾ ಪೂನಂ ಮೈಯಲ್ಲಿ ಬಟ್ಟೆ ನಿಲ್ತಾ ಇಲ್ಲ ಎಂದು ಅನೇಕರು ಕಾಮೆಂಟ್ ಮಾಡಿದ್ದಾರೆ.
Advertisement
ಒಂದು ಕಡೆ ಈ ರೀತಿ ಮೈ ಪ್ರದರ್ಶನ ಮಾಡುವಂತಹ ಬಟ್ಟೆಗಳನ್ನು ಧರಿಸಿಕೊಂಡು ಪೂನಂ ಬೀದಿಗೆ ಬರುತ್ತಿದ್ದರೆ, ಮತ್ತೊಂದು ಕಡೆ ಗರ್ಭಕಂಠ ಕ್ಯಾನ್ಸರ್ (Cervical cancer) ಕುರಿತಂತೆ ಸಾವಿನ ನಾಟಕವಾಡಿದ್ದ ಇವರು (Poonam Pandey) ಮಾನನಷ್ಟ ಸಂಕಷ್ಟ ಎದುರಿಸುತ್ತಿದ್ದಾರೆ. ಇವರು ಮಾಡಿದ ನಾಟಕದಿಂದಾಗಿ ಬಾಲಿವುಡ್ ನಟ ನಟಿಯರ, ಮಾಡೆಲ್ ಗಳನ್ನು ಅನುಮಾನದಿಂದ ನೋಡುವಂತಾಗಿದೆ ಎಂದು ಫೈಜರ್ ಅನ್ಸಾರಿ ಎನ್ನುವವರು ಕಾನ್ಪುರ ಪೊಲೀಸ್ ಕಮಿಷ್ನರ್ ಗೆ ದೂರು ಸಲ್ಲಿಸಿದ್ದಾರೆ.
Advertisement
Advertisement
ಇದಷ್ಟೇ ಅಲ್ಲದೇ, ಮೊನ್ನೆಯಷ್ಟೇ ಪೂನಂ ಪಾಂಡೆ ಮೇಲೆ ಎಫ್.ಐ.ಆರ್ (F.I.R) ದಾಖಲಾಗಿದೆ. ಅಲಿ ಕಾಶಿಪ್ ಅನ್ನೋ ವಕೀಲರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೂನಂ ಮತ್ತು ಆಕೆಯ ಮ್ಯಾನೇಜರ್ ಮೇಲೆ ಎಫ್.ಐ.ಆರ್ ದಾಖಲಾಗಿದೆ.
Advertisement
ಈ ಪ್ರಕರಣದ ಕುರಿತಂತೆ ಪೂನಂ ಮೇಲೆ ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಔಷಧಿ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು. ಈ ಕುರಿತಂತೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದಾರೆ. ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದರು.
ತನ್ನ ತಾಯಿ ಕೂಡ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್ ರೋಗಿಗಳು ಹೇಗೆ ನರಳುತ್ತಾರೆ ಎನ್ನುವುದನ್ನು ಸ್ವತಃ ನಾನು ನೋಡಿದ್ದೇನೆ. ಸದ್ಯ ತಾಯಿ ಆರೋಗ್ಯವಾಗಿದ್ದಾರೆ. ಅವರ ನೋವನ್ನು ನೋಡಿಯೇ ನಾನು ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಬೇಕು ಅಂತ ನಿರ್ಧಾರ ಮಾಡಿದ್ದು. ನೀವು ಟೀಕೆಗಳನ್ನು ಮಾಡುತ್ತಿದ್ದೀರಿ. ಆದರೆ, ನಾನು ಮಾಡಿದ್ದರ ಹಿಂದಿನ ಪರಿಣಾಮವನ್ನೂ ನೀವು ಗಮನಿಸಬೇಕು ಎಂದು ಅವರು ಪೋಸ್ಟ್ ಮಾಡಿದ್ದರು. ಆದರೂ, ಪೂನಂ ಮೇಲೆ ಕ್ರಮ ತಗೆದುಕೊಳ್ಳಲೇಬೇಕು ಎಂದು ಹಲವರು ಆಗ್ರಹ ಮಾಡಿದ್ದಾರೆ.