ಯಾದಗಿರಿ: ವಸತಿ ಶಾಲೆಯಲ್ಲಿ ನೀಡುತ್ತಿರುವ ಕಳಪೆ ಆಹಾರ ವಿತರಣೆ ಸಮಸ್ಯೆಯನ್ನು ವಿದ್ಯಾರ್ಥಿನಿಯರು ಡಿಸಿಗೆ ಹೇಳಲು 10 ಕಿ.ಮೀ ನಡೆದು ಜಿಲ್ಲಾಧಿಕಾರಿ ಆಫೀಸ್‍ಗೆ ಬಂದಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಯಾದಗಿರಿ ತಾಲೂಕಿನ ಮುಂಡರಗಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ, ಕಳಪೆ ಆಹಾರ ನೀಡುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳು ಇಂದು ಬೆಳಿಗ್ಗೆ ಊಟ ಮಾಡದೆ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ 7 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: 5-6 ದಿನ ಪುನೀತ್ ಸಮಾಧಿ ಬಳಿ ಯಾರನ್ನೂ ಬಿಡಲ್ಲ: ಅರಗ ಜ್ಞಾನೇಂದ್ರ
Advertisement
Advertisement
ಒಂದು ಕಡೆ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರೆ, ಮತ್ತೊಂದೆಡೆ ವಿದ್ಯಾರ್ಥಿನಿಯರು ವಸತಿ ಶಾಲೆಯಿಂದ ಯಾದಗಿರಿ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ವಾರ್ಡನ್ ಹಾಗೂ ಪ್ರಾಂಶುಪಾಲರನ್ನು ಬದಲಾವಣೆ ಮಾಡಬೇಕೆಂದು ಒತ್ತಾಯ ಮಾಡಿದರು. ಸುಮಾರು 10ಕಿ.ಮೀ ವರಗೆ ನಡೆದುಕೊಂಡು ಬಂದು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ಕಾಂಗ್ರೆಸ್‍ನವರು ಮತದಾರರಿಗೆ ನೇರವಾಗಿ ಹಣ ಹಂಚಿದ್ದಾರೆ: ಈಶ್ವರಪ್ಪ
Advertisement
Advertisement
ವಸತಿ ಶಾಲೆಯಲ್ಲಿ ಗುಣಮಟ್ಟದ ಆಹಾರ, ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಈ ಕೂಡಲೇ ಸಮಸ್ಯೆ ಬಗೆ ಹರಿಸಬೇಕೆಂದು ಪ್ರತಿಭಟನೆ ನಿರತ ವಿದ್ಯಾರ್ಥಿನಿಯರು ಆಗ್ರಹಿಸಿದ್ದಾರೆ. ಈ ವೇಳೆ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ಅವರು ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಕೂಡಲೇ ಸಮಸ್ಯೆ ಬಗೆಹರಿಸಲಾಗುತ್ತದೆಂದು ಭರವಸೆಯನ್ನು ನೀಡಿದ್ದಾರೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನ ಸಹಜ ಎನ್ನುವ ರೀತಿ ಬಿಂಬಿಸುವ ಕೆಲಸ ನಡೆಯುತ್ತಿದೆ: ಸಿ.ಟಿ.ರವಿ