ಬೆಂಗಳೂರು: ರಾಜ್ಯದ ರೈತರಿಗೆ ಕಹಿ ಸುದ್ದಿ. ಜುಲೈ ತಿಂಗಳಲ್ಲಿ ಮುಂಗಾರು ಮಳೆ ಕೈಕೊಡುವ ಸಾಧ್ಯತೆ ಇದೆ.
ಇನ್ನೂ ಮುಂದಿನ ಹತ್ತು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಮೋಡಗಳು ಕೊರತೆಯಿಂದಾಗಿ ಹವಾಮಾನ ಬದಲಾವಣೆಯಾಗದ ಕಾರಣ ಮಳೆಯಾಗುವ ಸಾಧ್ಯತೆ ಕಡಿಮೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.
Advertisement
ಕಳೆದ ವರ್ಷದ ಜೂನ್‍ನಲ್ಲಿ ಸುರಿದ ಮಳೆ ಈ ವರ್ಷವು ಸುರಿದಿಲ್ಲ. ರಾಜ್ಯದ 14 ಜಿಲ್ಲೆಗಳಲ್ಲಿ ಜೂನ್ ತಿಂಗಳಲ್ಲಿ ಮಳೆಯ ಕಡಿಮೆಯಾಗಿದೆ. ಶೇಕಡಾ 5 ರಷ್ಟು ಈ ಬಾರಿ ಜೂನ್ ತಿಂಗಳಲ್ಲಿ ಮಳೆಯ ಕೊರತೆ ಕಂಡಿದೆ. ಕಳೆದ ವರ್ಷ ಜೂನ್‍ನಲ್ಲಿ 220 ಎಂಎಂ ಮಳೆಯಾಗಿದ್ದರೆ, ಈ ಬಾರಿ ಕೇವಲ 185 ಎಂಎಂ ಮಳೆಯಾಗಿದೆ ಎಂದು ಮಾಹಿತಿ ನೀಡಿದರು.
Advertisement
ಈ ವರ್ಷ ಜೂನ್‍ನಲ್ಲಿ ಮಳೆಯ ಪ್ರಮಾಣದ ಅಂಕಿ ಅಂಶದ ಪ್ರಕಾರ ಮಲೆನಾಡಿನ ಎರಡು ಜಿಲ್ಲೆಗಳಲ್ಲಿ ಮಳೆಯ ಕೊರತೆ ಕಂಡಿದೆ. ಕರಾವಳಿ ಭಾಗದ ಮೂರು ಜಿಲ್ಲೆಗಳಲ್ಲಿ ಮಳೆಯ ಕೊರತೆ ಕಾಣಿಸಿದೆ. ದಕ್ಷಿಣ ಒಳನಾಡಿನ 9 ಜಿಲ್ಲೆಯಲ್ಲಿ ಮಳೆಯ ಕೊರತೆ ಇದೆ. ಉತ್ತರ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಮಳೆಯ ಕೊರತೆ ಕಂಡಿದೆ ಶ್ರೀನಿವಾಸ್ ರೆಡ್ಡಿ ತಿಳಿಸಿದರು.