ಬಳ್ಳಾರಿ: ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಓ.ಪಿ)ನಿಂದ ತಯಾರಿಸಿದ ಗಣೇಶ ಮೂರ್ತಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ. ಹಾಗಾಗಿ ಎಲ್ಲರೂ ಕೂಡ ಮಣ್ಣಿನ ಗಣೇಶ ಮೂರ್ತಿ ಪೂಜಿಸಿ ಪರಿಸರವನ್ನು ಸಂರಕ್ಷಿಸಿ ಎಂದು ಬಳ್ಳಾರಿ ಮಹಾನಗರಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರು ಕರೆ ನೀಡಿದ್ದಾರೆ.
ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಪಿಒಪಿ ಹಾಗೂ ರಾಸಾಯನಿಕ ಬಣ್ಣಗಳ ಲೇಪನದಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಉಪಯೋಗಿಸುವುದನ್ನು ನಿಷೇಧಿಸಿದೆ. ಮಣ್ಣಿನಿಂದ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಪೂಜಿಸಿ ಹಬ್ಬವನ್ನು ಸರಳವಾಗಿ ಆಚರಿಸಿ ಎಲ್ಲರೂ ಕೂಡ ಪರಿಸರವನ್ನು ಸಂರಕ್ಷಿಸುವ ಕೆಲಸ ಮಾಡೋಣ ಎಂದರು. ಇದನ್ನೂ ಓದಿ: ಆಡುವಾಗ ಗಣೇಶ ಮೂರ್ತಿ ನುಂಗಿದ ಮೂರು ವರ್ಷದ ಮಗು
ನೀರಿನ ಮೂಲಗಳನ್ನು ಸಂರಕ್ಷಣೆ ಮಾಡಲು ನಗರದಲ್ಲಿ ಹಾದು ಹೋಗುವ ತುಂಗಭದ್ರ ಕಾಲುವೆಯಲ್ಲಿ ನಿಗದಿಪಡಿಸಿದ ಸ್ಥಳಗಳಾದ ಬೆಂಗಳೂರು ರಸ್ತೆ, ತಾಳೂರು ರಸ್ತೆ, ಕಪ್ಪಗಲ್ಲು ರಸ್ತೆ, ಹೊಸಪೇಟೆ ರಸ್ತೆಯ ಅಲ್ಲಿಪುರ, ಬೆಳಗಲ್ಲು ರಸ್ತೆ(ಡಿ.ಸಿ.ನಗರ), ಸಿರುಗುಪ್ಪ ರಸ್ತೆ ಹವಂಭಾವಿ, ಬಂಡಿಹಟ್ಟಿ ಆಲದಹಳ್ಳಿ ರಸ್ತೆ ಹಾಗೂ ಭತ್ರಿ ಸ್ಥಳಗಳಲ್ಲಿಯೇ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಿ ಪರಿಸರ ಸಂರಕ್ಷಿಸಬೇಕು. ಪಿ.ಒ.ಪಿ ಗಣೇಶ ಮೂರ್ತಿಗಳು ನಗರದಲ್ಲಿ ಮಾರಾಟ ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಪ್ಯಾರಾಲಂಪಿಕ್ಸ್‌ನಲ್ಲಿ ಬೆಳ್ಳಿ ಪದಕ – ಇತಿಹಾಸ ನಿರ್ಮಿಸಿದ ಭವಿನಾಬೆನ್ ಪಟೇಲ್