ಭೋಪಾಲ್: ಜನಪ್ರಿಯ ಕಿರುತೆರೆ ನಟಿ ಶ್ವೇತಾ ತಿವಾರಿ ಅವರು ಹೇಳಿಕೆಯೊಂದನ್ನು ನೀಡಿ ಇದೀಗ ವಿವಾದಕ್ಕೀಡಾಗಿದ್ದಾರೆ. ಈ ಹೇಳಿಕೆ ಸಂಬಂಧ ತನಿಖೆ ನಡೆಸುವಂತೆ ಭೋಪಾಲ್ ಕಮಿಷನರ್‍ಗೆ ಗೃಹ ಸಚಿವರು ಸೂಚನೆ ನೀಡಿದ್ದಾರೆ.
ತಮ್ಮ ಮುಂಬರುವ ವೆಬ್ ಸೀರಿಸ್ ವೇಳೆ ನಟಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಟಿಯ ಹೇಳಿಕೆಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದು, ಪರ ವಿರೋಧ ಕಾಮೆಂಟ್ ಗಳು ಬರುತ್ತಿವೆ.
ಶ್ವೇತಾ ಹೇಳಿದ್ದೇನು..?
ಮಹಾಭಾರತ ಧಾರಾವಾಹಿಯಲ್ಲಿ ಭಗವಾನ್ ಕೃಷ್ಣ ಖ್ಯಾತಿಯ ಸೌರಭ್ ರಾಜ್ ಜೈನ್ ಜೊತೆ ಫ್ಯಾಷನ್ ಸಂಬಂಧಿತ ವೆಬ್ ಸರಣಿಯಲ್ಲಿ ಶ್ವೇತಾ ತಿವಾರಿ ನಟಿಸಿದ್ದಾರೆ. ಈ ವೆಬ್ ಸೀರಿಸ್ ಪ್ರಮೋಷನ್ ಇತ್ತೀಚೆಗೆ ಭೋಪಾಲ್ ನಲ್ಲಿ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಶ್ವೇತಾ ಕೂಡ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಶ್ವೇತಾ, ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾನೆ ಎಂದು ಮಾತಿನ ಭರದಲ್ಲಿ ಹೇಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಅನೇಕ ಬಳಕೆದಾರರು, ದೇವರ ಬಗ್ಗೆ ತಮಾಷೆಯಾಗಿ ಮಾತನಾಡಿದ್ದಕ್ಕೆ ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಗನ ವಿಚ್ಛೇದನಕ್ಕೆ ನಿಜವಾದ ಕಾರಣವನ್ನು ಬಹಿರಂಗ ಪಡಿಸಿದ ನಾಗಾರ್ಜುನ
ತನಿಖೆಗೆ ಸೂಚನೆ:
ನಟಿಯ ಈ ಹೇಳಿಕೆಯ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಭೋಪಾಲ್ ಕಮಿಷನರ್ ಗೆ ತ ಈ ಬಗ್ಗೆ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವರು, ಶ್ವೇತಾ ತಿವಾರಿ ಅವರು ನೀಡಿರುವ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಅಲ್ಲದೆ ಅವರ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಈ ಬಗ್ಗೆ ತನಿಖೆ ನಡೆಸಿ ವರದಿಯನ್ನು ನನಗೆ ಸಲ್ಲಿಸುವಂತೆ ಭೋಪಾಲ್ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Shweta Tiwari's remark that "Mere bra ki size bhagwan le rahe hain" has caused a stir on social media, and a Madhya Pradesh minister has requested a full inquiryhttps://t.co/gdjlJd6cl8 #ShwetaTiwari pic.twitter.com/rHw4mIR12e
— News Of Bollywood (@NewsOfBolly) January 27, 2022