ನವದೆಹಲಿ: ಜನಸಂಖ್ಯಾ ನಿಯಂತ್ರಣ ಮಸೂದೆಗೆ ಸಂಬಂಧಿಸಿದಂತೆ ಬಿಜೆಪಿ (BJP) ನಾಯಕರ ಹೇಳಿಕೆಗಳು ಆಗಾಗ ಮುನ್ನೆಲೆಗೆ ಬರುತ್ತಿವೆ. ಕೇಂದ್ರ ಸಚಿವರೂ ಆಗಿರವ ಬಿಜೆಪಿ ನಾಯಕ ಗಿರಿರಾಜ್ ಸಿಂಗ್ (Giriraj Singh) ಕೂಡ ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯ (Population) ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಲಿಂಗ ಆಧಾರಿತ ತಾರತಮ್ಯ ಮತ್ತು ಹಿಂಸಾಚಾರ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಸಂಖ್ಯಾ ನಿಯಂತ್ರಣ ಮಸೂದೆ (Population Control Bill) ಬಗ್ಗೆ ಅವರು ಮತ್ತೊಮ್ಮೆ ದನಿ ಎತ್ತಿದ್ದು, ಭಾರತದಲ್ಲಿ ಸೀಮಿತ ಸಂಪನ್ಮೂಲ ಇರುವುದರಿಂದ ಜನಸಂಖ್ಯಾ ನಿಯಂತ್ರಣ ಮಸೂದೆ ನಿರ್ಣಾಯಕವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಮೆಸ್ಸಿ ಆಟ ನೋಡಲು ಕಿಕ್ಕಿರಿದ ಅಭಿಮಾನಿಗಳು – 28 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಇಷ್ಟೊಂದು ಜನ!
Advertisement
Population control bill is crucial, we’ve limited resources. China implemented ‘one child policy’, controlled population & achieved development. China has 10 children born a minute while India has 30 children born a minute,how’ll we compete with China:Union minister Giriraj Singh pic.twitter.com/cxSEGc2AHA
— ANI (@ANI) November 27, 2022
Advertisement
ನಮ್ಮಲ್ಲಿ ಸೀಮಿತ ಸಂಪನ್ಮೂಲ ಇರುವುದರಿಂದ ಜನಸಂಖ್ಯೆ ನಿಯಂತ್ರಿಸುವುದು ಅವಶ್ಯಕವಾಗಿದೆ. ಭಾರತವು ವೇಗವಾಗಿ ಅಭಿವೃದ್ಧಿ ಹೊಂದಬೇಕಾದರೆ, ಈ ಬಗ್ಗೆ ಕಾನೂನು ರೂಪಿಸಬೇಕು ಎಂದು ಗಿರಿರಾಜ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಮದುವೆ ಆಮಂತ್ರಣ ಪತ್ರಿಕೆ ಜೊತೆಗೆ 75 ಸಾವಿರ ಭಗವದ್ಗೀತೆ ಪುಸ್ತಕ ವಿತರಣೆ – 132 ಜೋಡಿಗೆ ಮದುವೆ ಭಾಗ್ಯ
Advertisement
Advertisement
ಚೀನಾ (China) ಜನಸಂಖ್ಯೆ ನಿಯಂತ್ರಿಸುವುದಕ್ಕಾಗಿ `ಒನ್ ಚೈಲ್ಡ್ ಪಾಲಿಸಿ’ (ಒಂದು ಮಗುವನ್ನು ಹೊಂದುವ ನೀತಿ) ಜಾರಿಗೆ ತಂದಿತು. ಈ ಮೂಲಕ ಜನಸಂಖ್ಯೆಯನ್ನು ನಿಯಂತ್ರಿಸಿ ಅಭಿವೃದ್ಧಿ ಸಾಧಿಸಿತು. ಇಂದು ಚೀನಾದಲ್ಲಿ ನಿಮಿಷಕ್ಕೆ 10 ಮಕ್ಕಳು ಜನಿಸುತ್ತಿದ್ದರೆ, ಭಾರತದಲ್ಲಿ 30 ಮಕ್ಕಳು ಜನಿಸುತ್ತಿದ್ದಾರೆ. ಹೀಗಿರುವಾಗ ನಾವು ಚೀನಾದೊಂದಿಗೆ ಸ್ಪರ್ಧಿಸೋದು ಹೇಗೆ? ಆದ್ದರಿಂದ ಮಸೂದೆಯನ್ನು ಧರ್ಮ ಅಥವಾ ಪಂಗಡವನ್ನು ಲೆಕ್ಕಿಸದೇ ಪ್ರತಿಯೊಬ್ಬರಿಗೂ ಅನ್ವಯವಾಗುವಂತೆ ಜಾರಿಗೊಳಿಸಬೇಕು. ಅನುಸರಿಸದವರ ಮತದಾನದ ಹಕ್ಕನ್ನೂ ಕಸಿದುಕೊಳ್ಳಬೇಕು ಎಂದು ಕೇಂದ್ರ ಸಚಿವ ಸಲಹೆ ನೀಡಿದ್ದಾರೆ.
ಸರ್ಕಾರ ಮಹಿಳೆಯರ ಮೇಲಿನ ಯಾವುದೇ ದೌರ್ಜನ್ಯವನ್ನು ಧರ್ಮದ ಚೌಕಟ್ಟಿನಲ್ಲಿ ನೋಡಬಾರದು. ಅಂತಹ ಘಟನೆಗಳನ್ನು ಪೂರ್ವಾಗ್ರಹ ರಹಿತವಾಗಿ ಎಲ್ಲರೂ ಖಂಡಿಸಬೇಕು ಎಂದು ಹೇಳಿದ್ದಾರೆ.