ನವದೆಹಲಿ: ಇಬ್ಬರು ಸಿಬ್ಬಂದಿ ಸೇರಿದಂತೆ 5 ಜನರನ್ನು ಹೊತ್ತೊಯ್ಯುತ್ತಿದ್ದ ಪವನ್ ಹನ್ಸ್ ಹೆಲಿಕಾಪ್ಟರ್ ಅಂಡಮಾನ್ ಕರಾವಳಿಯ ಹಿಂದೂ ಮಹಾಸಾಗರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಪೋರ್ಟ್ಬ್ಲೇರ್ನಿಂದ ಟೇಕ್ ಆಫ್ ಆಗಿ ಮಾಯಾಬಂದರ್ಗೆ ತೆರಳುತ್ತಿದ್ದಾಗ ಹೆಲಿಕಾಪ್ಟರ್ ತಾಂತ್ರಿಕ ದೋಷ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಿದೆ. ಇಂದು (ಫೆ.24) ಬೆಳಿಗ್ಗೆ 9:30ರ ಸುಮಾರಿಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮಾಯಾಬಂದರ್ ಬಳಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಯಿತು ಎಂದು ಪವನ್ ಹನ್ಸ್ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಹೆಲಿಕಾಪ್ಟರ್ ಪೋರ್ಟ್ಬ್ಲೇರ್ನಿಂದ ಇಬ್ಬರು ಸಿಬ್ಬಂದಿ ಮತ್ತು ಐದು ಪ್ರಯಾಣಿಕರೊಂದಿಗೆ ಹೊರಟಿತ್ತು. ಎಲ್ಲರನ್ನೂ ರಕ್ಷಿಸಲಾಗಿದ್ದು, ಸುರಕ್ಷಿತವಾಗಿದ್ದಾರೆ. ಯಾವುದೇ ಪ್ರಾಣಾಪಾಯವಿಲ್ಲ ಎಂದಿದ್ದಾರೆ.

