ಚಿಕ್ಕಬಳ್ಳಾಪುರ: ಬೆಳ್ಳಿ ರಥದಲ್ಲಿ ಪುನೀತ್ ಭಾವಚಿತ್ರ ಇರಿಸಿ ಊರೆಲ್ಲಾ ಮೆರವಣಿಗೆ ಮಾಡಿ ಸಡಗರ ಸಂಭ್ರಮದಿಂದ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬವನ್ನು ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮೇಲೂರು ಗ್ರಾಮದಲ್ಲಿ ಸಂಭ್ರಮದಿಂದ ಆಚರಣೆ ಮಾಡಲಾಗಿದೆ.
ರಾಜಕುಮಾರ್ ಅಭಿಮಾನಿ ಬಳಗದ ವತಿಯಿಂದ ಗ್ರಾಮದ ಚೆಂಗಲರಾಯರೆಡ್ಡಿ ವೃತ್ತದಲ್ಲಿ ಪುನೀತ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ವಿಶೇಷ ಪೂಜೆ ಸಲ್ಲಿಸಿ ಅನ್ನಸಂತರ್ಪಣೆ ಮಾಡಲಾಗಿದೆ. ಕೇಕ್ ಕತ್ತರಿಸಿ ಪುನೀತ್ ರಾಜಕುಮಾರ್ ಹುಟ್ಟು ಹಬ್ಬ ಆಚರಿಸಿದ್ದಾರೆ. ತದನಂತರ ಗ್ರಾಮದ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಹುಟ್ಟು ಹಬ್ಬ ಆಚರಿಸಿದ್ದಾರೆ. ಇದನ್ನೂ ಓದಿ: ‘ಜೇಮ್ಸ್’ ಸಿನಿಮಾ ಫಸ್ಟ್ ಹಾಫ್ ಹೇಗಿದೆ? – ಕಣ್ಣಿಗೆ ಹಬ್ಬ, ಮನಸ್ಸಿಗೆ ಬೇಸರ
ಪೂಜೆ ಸಲ್ಲಿಸಿ ಪುನೀತ್ ರಾಜಕುಮಾರ್ ಅವರನ್ನು ನೆನೆದು ಇಡೀ ಗ್ರಾಮಸ್ಥರು ಪುನೀತ್ ಆಗಲಿಕೆಗೆ ಕಂಬನಿ ಮಿಡಿದಿದ್ದಾರೆ. ಪುನೀತ್ ಅಭಿನಯದ ಜೇಮ್ಸ್ ಚಿತ್ರ ಭರ್ಜರಿ ಪ್ರದರ್ಶನ ಕಾಣಲಿ ಅಂತ ಗ್ರಾಮದ ಅಭಿಮಾನಿಗಳು ಆಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹ್ಯಾಪಿ ಬರ್ತ್ ಡೇ ಅಪ್ಪು : ದಕ್ಷಿಣದ ಸಿನಿತಾರೆಯರ ಭಾವುಕ ಸಂದೇಶ