– ಸಾರಿಗೆ ಸಂಸ್ಥೆಗಳಿಗೆ ವರ್ಷಕ್ಕೆ 2,000 ಕೋಟಿ ರೂ. ನಷ್ಟ; ಬೈರತಿ ಸುರೇಶ್
ಚಿಕ್ಕಬಳ್ಳಾಪುರ: ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ನ.5ರಿಂದ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಸುಳಿವು ನೀಡಿದ್ದಾರೆ.
ಚಿಕ್ಕಬಳ್ಳಾಪುರ ನಗರದಲ್ಲಿ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್ ದರ ಏರಿಕೆ ಕುರಿತು ನಿರ್ಧಾರ ಕೈಗೊಳ್ಳುವ ಜವಾಬ್ದಾರಿಯನ್ನು ಸಾರಿಗೆ ಇಲಾಖೆಗೆ ನೀಡಲಾಗಿದೆ. ಎಷ್ಟು ಪ್ರಮಾಣದಲ್ಲಿ ದರ ಹೆಚ್ಚಳ ಮಾಡಬೇಕು ಎಂಬುದನ್ನು ನವೆಂಬರ್ 4ರಂದು ನಡೆಯುವ ಸಭೆಯಲ್ಲಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.
ಸಾರಿಗೆ ಸಂಸ್ಥೆಗಳು ವರ್ಷಕ್ಕೆ ಸುಮಾರು 2,000 ಕೋಟಿ ರೂಪಾಯಿ ನಷ್ಟ ಅನುಭವಿಸುತ್ತಿವೆ. ಹೀಗಾಗಿ ಸಾರಿಗೆ ಸಂಸ್ಥೆಗಳು ಸುಗಮವಾಗಿ ಕಾರ್ಯನಿರ್ವಹಿಸಬೇಕು ಮತ್ತು ಸಂಸ್ಥೆಗಳನ್ನು ಉಳಿಸಿಕೊಳ್ಳಬೇಕಾದರೆ ಪ್ರಯಾಣ ದರ ಹೆಚ್ಚಳ ಅನಿವಾರ್ಯವಾಗಿದೆ ಎಂದು ದರ ಏರಿಕೆಯನ್ನು ಸಮರ್ಥಿಸಿಕೊಂಡರು.ಇದನ್ನೂ ಓದಿ: ಹಿಟ್ & ರನ್ ಆರೋಪ: ಆಕ್ಸಿಡೆಂಟ್ ಮಾಡಿದ್ದೇ ಗೊತ್ತಿರಲಿಲ್ಲ ಎಂದ ಯೂಟ್ಯೂಬರ್ ನಿಖಿಲ್
ಇನ್ನು ಬಸ್ ದರ ಏರಿಕೆ ವಿಚಾರದಲ್ಲೂ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಾರೆ ಎಂದು ಸಚಿವರು ವ್ಯಂಗ್ಯವಾಡಿದರು. ಜನವರಿಯಿಂದ ಐದು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾದಾಗ ಬಿಜೆಪಿಯವರು ಏಕೆ ಪ್ರಶ್ನಿಸಲಿಲ್ಲ ಎಂದು ಪ್ರತಿಪಕ್ಷದ ವಿರುದ್ಧ ಟೀಕಾಪ್ರಹಾರ ನಡೆಸಿದರು.ಇದನ್ನೂ ಓದಿ: ದೆಹಲಿಯಲ್ಲಿ ಕನ್ನಡದ ಕಲರವ; ಕರ್ನಾಟಕ ಭವನದಲ್ಲಿ ಸಿದ್ದರಾಮಯ್ಯರಿಂದ ಧ್ವಜಾರೋಹಣ
