ನವದೆಹಲಿ: ನವರಾತ್ರಿ (Navaratri) ಸಂದರ್ಭದಲ್ಲಿ ಸಂಸತ್ತಿನ ವಿಶೇಷ ಅಧಿವೇಶನ (Parliament Special Session) ಕರೆಯುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ.
ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ವಿಂಗಡಣೆ ಕುರಿತ ಶಾಸನಾತ್ಮಕ ಪ್ರಕ್ರಿಯೆಯನ್ನು ಮುಂದುವರಿಸುವ ನಿಟ್ಟಿನಲ್ಲಿ ವಿಶೇಷ ಅಧಿವೇಶನ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಅಕ್ಟೋಬರ್ 11ರಿಂದ 15ರ ನಡುವೆ ವಿಶೇಷ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಆದರೆ ಅಧಿವೇಶನದ ದಿನಾಂಕದ ಕುರಿತು ಇನ್ನೂ ಅಂತಿಮವಾಗಿಲ್ಲ. ಇದನ್ನೂ ಓದಿ: ರಾಮನಗರ | ಹಳ್ಳದ ನೀರಲ್ಲಿ ಮುಳುಗಿ ಇಬ್ಬರು ಮಕ್ಕಳು ದುರ್ಮರಣ
ನವರಾತ್ರಿ ಹಬ್ಬ ಅಕ್ಟೋಬರ್ 11ರಿಂದ ಆರಂಭವಾಗಿ ಅಕ್ಟೋಬರ್ 20ರವರೆಗೆ ನಡೆಯಲಿದೆ. ಹೀಗಾಗಿ ಹಬ್ಬದ ಆರಂಭಿಕ ದಿನಗಳಲ್ಲಿ ಸಂಸತ್ತಿನ ವಿಶೇಷ ಅಧಿವೇಶನ ನಡೆಸುವ ಸಾಧ್ಯತೆ ಕುರಿತು ಚರ್ಚೆ ನಡೆಯುತ್ತಿದೆ. ಇದನ್ನೂ ಓದಿ: ಡಿಸೆಂಬರ್ನಲ್ಲಿ ಪ್ರಧಾನಿ ಮೋದಿ ಅಮೆರಿಕ ಪ್ರವಾಸ – ಟ್ರಂಪ್ ಜೊತೆಗೆ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ!
ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ಮುಂದಿನ ಶಾಸನಾತ್ಮಕ ಪ್ರಕ್ರಿಯೆಯನ್ನು ಹೇಗೆ ಮುಂದುವರಿಸಬೇಕು ಎಂಬ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಈ ವಿಚಾರದಲ್ಲಿ ಪ್ರತಿಪಕ್ಷಗಳೊಂದಿಗೂ ಸರ್ಕಾರ ಸಂಪರ್ಕದಲ್ಲಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ತಮಿಳುನಾಡು ಹಾಸ್ಟೆಲ್ ಮೆನುವಿನಲ್ಲಿ ಗೋಮಾಂಸ ಸೇರಿಸಲು ವಿದ್ಯಾರ್ಥಿಗಳ ಡಿಮ್ಯಾಂಡ್
ಮಹಿಳಾ ಮೀಸಲಾತಿಗೆ ಸಂಬಂಧಿಸಿದಂತೆ 2023ರಲ್ಲಿ ನಾರಿ ಶಕ್ತಿ ವಂದನ್ ಅಧಿನಿಯಮ ಜಾರಿಗೆ ತರಲಾಗಿತ್ತು. ಇದರ ಅಡಿಯಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಸುಮಾರು ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡುವ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ದಾವಣಗೆರೆ | ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿ ಸಾವು
ಆದರೆ ಮಹಿಳಾ ಮೀಸಲಾತಿಯ ಅನುಷ್ಠಾನವು ಜನಗಣತಿ ಮತ್ತು ನಂತರ ನಡೆಯುವ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯೊಂದಿಗೆ ಸಂಪರ್ಕ ಹೊಂದಿದೆ. ಹೀಗಾಗಿ ಕ್ಷೇತ್ರ ಪುನರ್ವಿಂಗಡಣೆ ನಡೆಸಿದ ನಂತರ ಮಹಿಳಾ ಮೀಸಲಾತಿ ಜಾರಿಗೆ ಬರಲಿದೆ. ಒಂದು ವೇಳೆ ವಿಶೇಷ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ಅಂತಿಮ ನಿರ್ಧಾರ ಕೈಗೊಂಡರೆ, ಅಕ್ಟೋಬರ್ ಮೊದಲ ವಾರದಲ್ಲೇ ಅಧಿಕೃತ ಘೋಷಣೆ ಹೊರಡಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಸರ್ಕಾರದ ವಿರುದ್ಧ ಹೆಚ್ಡಿಕೆ ದಾಖಲೆ ಬಿಡುಗಡೆ ಬಾಂಬ್ – ಕುಮಾರಸ್ವಾಮಿ ಬಳಿಯಿದ್ಯಾ ಪ್ರಭಾವಿ ನಾಯಕನ ಆಡಿಯೋ?

