BidarCrimeDistrictsKarnatakaLatestMain Post

ತಡರಾತ್ರಿ ಬಸವಕಲ್ಯಾಣದಲ್ಲಿ ಮುಸ್ಲಿಮರಿಂದ ದಿಢೀರ್ ಪ್ರತಿಭಟನೆ – ವ್ಯಕ್ತಿ ಅರೆಸ್ಟ್

ಬೀದರ್: ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ವ್ಯಕ್ತಿಯನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ.

ಬಸವಕಲ್ಯಾಣದ ರಾಜಕುಮಾರ್ ಮಜ್ಜಿಗೆ ವಾಟ್ಸಪ್ ಗ್ರೂಪ್‍ನಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ. ಈ ಹಿನ್ನೆಲೆ ತಡರಾತ್ರಿ ಬಸವಕಲ್ಯಾಣದಲ್ಲಿ ನೂರಾರು ಮುಸ್ಲಿಮರು ದಿಢೀರ್ ಪ್ರತಿಭಟನೆ ಮಾಡಿ ಪೋಸ್ಟ್ ಶೇರ್ ಮಾಡಿದ ರಾಜಕುಮಾರ್ ಮಜ್ಜಿಗೆಯನ್ನು ಬಂಧಿಸಬೇಕು ಎಂದು ಆಗ್ರಹ ಮಾಡಲಾಯಿತು. ಇದನ್ನೂ ಓದಿ: ಮನೆಗೆ ಕರೆಸಿ ನವಜೋಡಿಯನ್ನು ಹತ್ಯೆ ಮಾಡಿದ ನವವಧು ಪೋಷಕರು

ಬಸವಕಲ್ಯಾಣ ಗಾಂಧಿ ವೃತದ ಬಳಿ ಜಮಾಸಿದ ನೂರಾರು ಮುಸ್ಲಿಮರು ಪ್ರತಿಭಟನೆ ಮಾಡಿದ್ದು, ಪ್ರತಿಭಟನೆ ವೇಳೆ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಬಂದ ಡಿವೈಎಸ್‍ಪಿ ಸೋಮಲಿಂಗ ಕುಂಬಾರ ಈಗಾಗಲೇ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ವ್ಯಕ್ತಿ ಮೇಲೆ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳುತ್ತೇವೆ ಎಂದು ಭರವಸೆ ಕೊಟ್ಟರು. ಬಳಿಕ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ.

ಪ್ರತಿಭಟನೆ ವೇಳೆ ಕೆಲ ಸಮಯ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರ ಸಮಯ ಪ್ರಜ್ಞೆಯಿಂದ ಪ್ರತಿಭಟನೆಯನ್ನು ನಿಲ್ಲಿಸಿದ್ದಾರೆ. ಇದನ್ನೂ ಓದಿ: ಮೊದಲಬಾರಿಗೆ ಟ್ವಿಟ್ಟರ್ ಉದ್ಯೋಗಿಗಳ ಜೊತೆ ಮಾತನಾಡಲಿದ್ದಾರೆ ಮಸ್ಕ್ 

Leave a Reply

Your email address will not be published.

Back to top button