Recent News

ಧವನ್ ಬದಲು ಡೆಲ್ಲಿ ಬಾಯ್ ರಿಷಬ್‍ಗೆ ಇಂಗ್ಲೆಂಡ್ ಟಿಕೆಟ್

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ವಿಶ್ವಕಪ್ ಟೂರ್ನಿಯಿಂದ ಮೂರು ವಾರಗಳ ವಿಶ್ರಾಂತಿ ಪಡೆದಿರುವ ಶಿಖರ್ ಧವನ್ ಅವರ ಸ್ಥಾನದಲ್ಲಿ ರಿಷಬ್ ಪಂತ್‍ಗೆ ಸ್ಥಾನ ಸಿಗುವ ಸಾಧ್ಯತೆ ಇದೆ.

ಬಿಸಿಸಿಐ ಮೂಲಗಳ ಪ್ರಕಾರ ರಿಷಬ್ ಪಂತ್‍ಗೆ ಸ್ಥಾನ ಖಚಿತವಾಗಿದ್ದು, ಈಗಾಗಲೇ ಪಂತ್ ಇಂಗ್ಲೆಂಡ್ ಪ್ರಯಾಣಕ್ಕೆ ಸಿದ್ಧತೆ ನಡೆಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಉತ್ತಮ ಫಾರ್ಮ್ ನಲ್ಲಿದ್ದ ಧವನ್ ಗಾಯಗೊಂಡಿರುವುದು ಟೀಂ ಇಂಡಿಯಾ ಹಿನ್ನೆಡೆಯನ್ನು ಉಂಟಾಗುವಂತೆ ಮಾಡಿದೆ. ವಿಶ್ವಕಪ್ ಆಯ್ಕೆ ವೇಳೆ ದಿನೇಶ್ ಕಾರ್ತಿಕ್ ಆಯ್ಕೆಯಿಂದ ತಂಡದಲ್ಲಿ ರಿಷಬ್ ಸ್ಥಾನ ಕಳೆದುಕೊಂಡಿದ್ದರು. 21 ವರ್ಷದ ರಿಷಬ್‍ಗೆ ಸದ್ಯ 48 ಗಂಟೆಗಳ ಒಳಗೆ ಇಂಗ್ಲೆಂಡ್‍ಗೆ ಪ್ರಯಾಣ ಆರಂಭಿಸಲಿದ್ದಾರೆ ಎನ್ನಲಾಗಿದೆ.

ಧವನ್ ಗಾಯಗೊಂಡಿರುವ ಅವರ ಸ್ಥಾನದಲ್ಲಿ ರಿಷಬ್ ಆಯ್ಕೆ ಮಾಡುವುದು ಖಚಿತವಾಗಿದ್ದರು ಕೂಡ ಆಡುವ 11 ಬಳಗದಲ್ಲಿ ಸ್ಥಾನ ಸಿಗುವ ಸಾಧ್ಯತೆ ಕಡಿಮೆ ಇದೆ. ಸದ್ಯ ನಂ.04 ಸ್ಥಾನದಲ್ಲಿ ಕಣಕ್ಕೆ ಇಳಿಯುತ್ತಿರುವ ಕೆಎಲ್ ರಾಹುಲ್ ಅವರಿಗೆ ಬಡ್ತಿ ನೀಡಿ ರೋಹಿತ್ ಅವರೊಂದಿಗೆ ಆರಂಭಿಕರಾಗಿ ಕಣಕ್ಕೆ ಇಳಿಸುವ ಸಾಧ್ಯತೆ ಇದೆ. ಈ ವಿಚಾರದಲ್ಲಿ ಆಯ್ಕೆ ಸಮಿತಿ ಸಾಕಷ್ಟು ಚಿಂತನೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ.

ಟೀಂ ಇಂಡಿಯಾ ಮ್ಯಾನೇಜ್‍ಮೆಂಟ್ ಸದಸ್ಯರೊಬ್ಬರು ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದು, ರಿಷಬ್ ಅವರಿಗೆ ಆರಂಭಿಕ ಅಥವಾ ಮಧ್ಯಮ ಕ್ರಮಾಂಕದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ. ಪ್ರಮುಖವಾಗಿ ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯರೊಂದಿಗೆ ಪಂತ್ ಜವಾಬ್ದಾರಿಯನ್ನ ನಿರ್ವಹಿಸುವ ಸಾಮಥ್ರ್ಯ ಹೊಂದಿದ್ದಾರೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಅಲ್ಲದೇ ಸದ್ಯದ ಪರಿಸ್ಥಿತಿಯಲ್ಲಿ ಕೆಎಲ್ ರಾಹುಲ್ ಆರಂಭಿಕರಾಗಿ ಸಾಕಷ್ಟು ಅನುಭವವನ್ನು ಹೊಂದಿದ್ದು, ಮಧ್ಯಮ ಕ್ರಮಾಂಕದಲ್ಲಿ ರಾಹುಲ್ ಅವರ ಸ್ಥಾನವನ್ನು ಪಂತ್ ತುಂಬಲಿದ್ದಾರೆ ಎಂದಿದ್ದಾರೆ. ಅಲ್ಲದೇ ಧವನ್ ರಂತೆ ಆಕ್ರಮಣಕಾರಿಯಾಗಿ ಬ್ಯಾಟ್ ಬೀಸಬಲ್ಲ ಆಟಗಾರರ ಅಗತ್ಯ ತಂಡಕ್ಕಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *